alex Certify ಮುಂಬೈನಿಂದ ಆಗಮಿಸಿದ್ದ ವ್ಯಕ್ತಿಗೆ ಕೊರೊನಾ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಬೈನಿಂದ ಆಗಮಿಸಿದ್ದ ವ್ಯಕ್ತಿಗೆ ಕೊರೊನಾ ಸೋಂಕು

ಶಿವಮೊಗ್ಗ: ಮುಂಬೈನಿಂದ ಹಿಂತಿರುಗಿದ್ದ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಪಾಸಿಟಿವ್ ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು.

ಸದರಿ ವ್ಯಕ್ತಿ ಈಗಾಗಲೇ ಕ್ವಾರೆಂಟೈನ್‍ನಲ್ಲಿದ್ದ ಕಾರಣ ಆತಂಕಪಡುವ ಅಗತ್ಯವಿಲ್ಲ. ಆ ವ್ಯಕ್ತಿಯೊಂದಿಗೆ ಪ್ರಾಥಮಿಕವಾಗಿ ಸಂಬಂಧ ಹೊಂದಿದ್ದ 12 ಮಂದಿಯನ್ನು ಗುರುತಿಸಲಾಗಿದ್ದು, ಎಲ್ಲರನ್ನು ಕ್ವಾರೆಂಟೈನ್ ಮಾಡಲಾಗಿದೆ.

ಇನ್ನುಳಿದಂತೆ ದ್ವಿತೀಯ ಹಂತದ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಗುರುತಿಸಿ ತಕ್ಷಣ ಕ್ವಾರೆಂಟೈನ್ ಮಾಡಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...