ಮೆಕ್ಕೆಜೋಳ ಬೆಳೆದ ರೈತರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ ಮಾಡಲಿದ್ದು, ನೋಂದಣಿ ಪ್ರಕ್ರಿಯೆ ಮೇ 9 ರಿಂದ ಆರಂಭವಾಗಲಿದೆ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಈ ವಿಷಯವನ್ನು ತಿಳಿಸಿದ್ದು, ಕ್ವಿಂಟಾಲ್ ಗೆ 1,760 ರೂಪಾಯಿ ಬೆಂಬಲ ಬೆಲೆಯಲ್ಲಿ ಒಟ್ಟು 22 ಸಾವಿರ ಮೆಟ್ರಿಕ್ ಟನ್ ಖರೀದಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಜೊತೆಗೆ ಮುಂದಿನ ದಿನಗಳಲ್ಲಿ ಡೈರಿಮಿಲ್ಕ್, ಕ್ಯಾಡ್ಬರಿ ಚಾಕ್ಲೇಟ್ ಮಾದರಿಯಲ್ಲಿ ಕೆಎಂಎಫ್ ನಿಂದ ಪ್ರೀಮಿಯಂ ಚಾಕಲೇಟ್ ತಯಾರಿಸಿ ಮಾರುಕಟ್ಟೆಗೆ ಪರಿಚಯಿಸಲು ನಿರ್ಧರಿಸಲಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.