alex Certify ಮೆಟ್ರೋ ಪ್ರಯಾಣಿಕರಿಗೆ ತಿಳಿದಿರಲಿ ಈ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಟ್ರೋ ಪ್ರಯಾಣಿಕರಿಗೆ ತಿಳಿದಿರಲಿ ಈ ಮಾಹಿತಿ

ನಮ್ಮ ಮೆಟ್ರೊ ಎರಡನೇ ಹಂತದಲ್ಲಿ ವಾಣಿಜ್ಯ ಕಾರ್ಯಚರಣೆ ಪೂರ್ವ ಸಿದ್ಧತೆಯ ಕಾಮಗಾರಿಗಳಿಗಾಗಿ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ. ಆರ್.ವಿ. ರಸ್ತೆಯಿಂದ ಯಲಚೇನಹಳ್ಳಿ ಮೆಟ್ರೋ ಸ್ಟೇಷನ್‌ವರೆಗೆ ಕಾಮಗಾರಿ ನಡೆಸಲಾಗುತ್ತದೆ. ಹೀಗಾಗಿ ಯಲಚೇನಹಳ್ಳಿಯಿಂದ ಅಂಜನಾಪುರದವರೆಗಿನ ರೈಲು ಮಾರ್ಗದಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಮಾರ್ಗದಲ್ಲಿ ವಾಣಿಜ್ಯ ಕಾರ್ಯಾಚರಣೆಗೆ ಪೂರ್ವ ಸಿದ್ಧತೆ ಕಾಮಗಾರಿಗಳನ್ನು ಮೂರು ದಿನಗಳ ಕಾಲ ನಡೆಸಲಾಗುತ್ತದೆ. ನವೆಂಬರ್ 17 ರಿಂದ 19ರವರೆಗೆ ಕಾಮಗಾರಿ ನಡೆಯಲಿದೆ ಎಂದು ಪ್ರತಿಕಾ ಪ್ರಕಟಣೆಯಲ್ಲಿ ಬಿಎಂಆರ್‌ಸಿಎಲ್ ತಿಳಿಸಿದೆ.

ಇನ್ನು ರೈಲುಗಳ ಸೇವೆಯು ದಿನಾಂಕ 17ರ ಬೆಳಗ್ಗೆ 7ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಾಗಸಂದ್ರ ನಿಲ್ದಾಣದಿಂದ ಆರ್.ವಿ. ರಸ್ತೆ ನಿಲ್ದಾಣದವರೆಗೆ ಮಾತ್ರ ಇರುತ್ತದೆ. 20ರಂದು ಹಸಿರು ಮಾರ್ಗದಲ್ಲಿ ಬೆಳಿಗ್ಗೆ 7 ಗಂಟೆಯಿಂದ ನಾಗಸಂದ್ರ ನಿಲ್ದಾಣದಿಂದ ಯಲಚೇನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಎಂದಿನಂತೆ ರೈಲು ಸೇವೆ ಪ್ರಾರಂಭವಾಗುತ್ತದೆ. ನೇರಳೆ ಮಾರ್ಗದ ಬೈಯಪ್ಪನಹಳ್ಳಿ ಮತ್ತು ಮೈಸೂರು ರಸ್ತೆ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...