ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳಿಗೆ ಸರ್ಕಾರ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡಿದೆ. ಫಾಸ್ಟ್ ಟ್ಯಾಗ್ ಹೊಂದಿಲ್ಲದ ವಾಹನಗಳಿಂದ ದುಪ್ಪಟ್ಟು ಶುಲ್ಕ ವಸೂಲಿ ಮಾಡಲಾಗುತ್ತಿದೆ. ಫಾಸ್ಟ್ ಟ್ಯಾಗ್ ಇರುವ ಕಾರಣ ಹೆದ್ದಾರಿಗಳಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂಬ ನಿಟ್ಟಿನಲ್ಲಿ ಇದನ್ನು ಜಾರಿಗೆ ತಂದಿದ್ದರೂ ಸಮಸ್ಯೆ ಮಾತ್ರ ತಪ್ಪಿಲ್ಲ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವೇಳೆ ಫಾಸ್ಟ್ ಟ್ಯಾಗ್ ನಲ್ಲಿ ಒಮ್ಮೊಮ್ಮೆ ಹೆಚ್ಚುವರಿ ಹಣ ಕಡಿತವಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿದ್ದು, ಅಂತಹ ಸಂದರ್ಭದಲ್ಲಿ ಫಾಸ್ಟ್ ಟ್ಯಾಗ್ ಪಡೆದುಕೊಂಡ ಬ್ಯಾಂಕುಗಳ ಕಾಲ್ ಸೆಂಟರ್ಗಳನ್ನು ಸಂಪರ್ಕಿಸಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದಾಗಿದೆ.
ಹೊಸ ವಾಹನ ಖರೀದಿಸುವವರು, ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕಿಂಗ್ ನ್ಯೂಸ್
ಇನ್ನು ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಕುರಿತಂತೆ 1033 ಸಂಖ್ಯೆಗೆ ಕರೆ ಮಾಡಬೇಕಾಗಿದ್ದು, ರಾಜ್ಯ ಹೆದ್ದಾರಿಗಳ ಸಮಸ್ಯೆಗಳ ಕುರಿತಂತೆ 080-22024000 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.