ದೇಶದಲ್ಲಿ ಕೊರೊನಾ ವಕ್ಕರಿಸಿರುವ ಪರಿಣಾಮ ಇದರ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ರೈಲು ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು.
ಆ ಬಳಿಕ ಲಾಕ್ಡೌನ್ ಸಡಿಲಿಕೆ ಮಾಡಿದ್ದು, ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳುವ ಸಲುವಾಗಿ ಶ್ರಮಿಕ್ ರೈಲು ಸಂಚಾರವನ್ನು ಆರಂಭಿಸಲಾಗಿತ್ತು. ಇದರ ಜೊತೆಗೆ ಕೆಲವೊಂದು ಮಾರ್ಗಗಳಲ್ಲಿ ಕೆಲ ರೈಲುಗಳು ಸಂಚಾರ ಆರಂಭಿಸಿದ್ದವು.
ಆದರೆ ಇದೀಗ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರೈಲುಗಳ ಸಂಚಾರವನ್ನು ಆಗಸ್ಟ್ 12 ರವರೆಗೆ ರದ್ದುಗೊಳಿಸಲಾಗಿದೆ. ಈ ರೈಲುಗಳ ಪ್ರಯಾಣಕ್ಕೆ ಮುಂಗಡವಾಗಿ ಕಾಯ್ದಿರಿಸಲಾಗಿದ್ದ ಟಿಕೆಟ್ ಹಣವನ್ನು ಪ್ರಯಾಣಿಕರಿಗೆ ಮರುಪಾವತಿಸಲಾಗುತ್ತಿದೆ.