ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದು, ಇದು ಈಗಲೂ ಮುಂದುವರೆದಿದ್ದರು ಸಹ ಸಾರ್ವಜನಿಕ ಜನ ಜೀವನಕ್ಕೆ ಸಂಬಂಧಿಸಿದಂತೆ ಬಹಳಷ್ಟು ಸಡಿಲಿಕೆಗಳನ್ನು ನೀಡಲಾಗಿದೆ. ಜೊತೆಗೆ ಆರ್ಥಿಕ ಚಟುವಟಿಕೆಗಳಿಗೂ ಅನುವು ಮಾಡಿಕೊಡಲಾಗಿದೆ.
ಹೀಗಾಗಿ ಸಾರ್ವಜನಿಕ ಜೀವನ ಯಥಾಪ್ರಕಾರವಾಗಿ ನಡೆದಿದ್ದು ಇದರ ಮಧ್ಯೆ ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಏರಿಕೆ ಮಾಡಿದ್ದು, ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಮತ್ತೊಂದು ಬರೆ ಎಳೆದಂತಾಗಿದೆ.
ಕಳೆದೆರಡು ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು 60 ಪೈಸೆಯಂತೆ ಒಟ್ಟು 1.20 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈ ಬೆಲೆ ಏರಿಕೆಯ ಪರ್ವ ಮುಂದಿನ ದಿನಗಳಲ್ಲೂ ಮುಂದುವರೆಯಲಿದೆ ಎಂದು ಹೇಳಲಾಗುತ್ತಿದೆ. ಲಾಕ್ ಡೌನ್ ಕಾರಣಕ್ಕೆ ಸಾರ್ವಜನಿಕರು ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದು, ಈಗ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿಹೋಗಿದ್ದಾರೆ.