ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ವಿಶ್ವ ಶ್ರೀಮಂತರ ಟಾಪ್ 10 ಪಟ್ಟಿಯಲ್ಲಿ ಕಾಣಿಸಿಕೊಂಡ ಏಷ್ಯಾದ ಏಕೈಕ ಶ್ರೀಮಂತ ಎಂಬ ಹೆಗ್ಗಳಿಕೆಗೆ ಮುಕೇಶ್ ಅಂಬಾನಿ ಪಾತ್ರರಾಗಿದ್ದಾರೆ.
ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಲಾಕ್ ಡೌನ್ ಜಾರಿಗೊಳಿಸಿದ್ದ ಕಾರಣ ಬಹುತೇಕ ಶ್ರೀಮಂತರ ಸಂಪತ್ತು ಇಳಿಕೆಯಾಗಿತ್ತು. ಆದರೆ ಅಚ್ಚರಿ ಎಂಬಂತೆ ಮುಕೇಶ್ ಅಂಬಾನಿ ಸಂಪತ್ತಿನಲ್ಲಿ ನಿರಂತರವಾಗಿ ಏರಿಕೆಯಾಗುತ್ತಿದೆ.
ಹೀಗಾಗಿ ಜನವರಿ ತಿಂಗಳಿನಿಂದ ಆಗಸ್ಟ್ ತಿಂಗಳವರೆಗೆ ಮುಕೇಶ್ ಅಂಬಾನಿ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಹತ್ತು ಸ್ಥಾನಗಳ ಬಡ್ತಿ ಪಡೆದುಕೊಂಡಿದ್ದಾರೆ. ಈ ಅವಧಿಯಲ್ಲಿ ಅವರ ಆಸ್ತಿ ಮೌಲ್ಯ 22 ಬಿಲಿಯನ್ ಡಾಲರ್ ನಷ್ಟು ಹೆಚ್ಚಾಗಿದೆ. ಮುಕೇಶ್ ಅಂಬಾನಿಯವರ ಒಟ್ಟು ಆಸ್ತಿ ಮೌಲ್ಯ ಈಗ 80.6 ಬಿಲಿಯನ್ ಡಾಲರ್ ಗಳೆಂದು ಹೇಳಲಾಗಿದೆ.