ಬ್ಯಾಂಕ್ ವಿಲೀನಕರಣ ಸಂಬಂಧ ದೊಡ್ಡ ಮಟ್ಟದಲ್ಲಿ ವಿರೋಧದ ಕೂಗು ಕೇಳಿ ಬಂದಿತ್ತು. ಕೇಂದ್ರದ ನಡೆಗೆ ಬ್ಯಾಂಕ್ ವಲಯದ ಮಂದಿ ಪ್ರತಿಭಟನೆಗಳನ್ನು ಮಾಡಿದ್ದರು. ಅಷ್ಟೆ ಅಲ್ಲ ಇದರ ಕಾವು ಇನ್ನು ಹಾಗೆ ಇದೆ. ಆದರೂ ಹಲವು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳನ್ನು ವಿಲೀನಗೊಳಿಸಿದೆ.
ಇದೀಗ ಕೇಂದ್ರ ಸರ್ಕಾರ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಕೆಲ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳನ್ನು ಖಾಸಗೀಕರಣಗೊಳಿಸಲು ಚಿಂತನೆ ನಡೆಸಿದೆ. ನೀತಿ ಆಯೋಗದ ಪ್ರಸ್ತಾವದ ಅನ್ವಯ ಮೊದಲ ಹಂತದಲ್ಲಿ ಪಂಜಾಬ್ ಅಂಡ್ ಸಿಂಧ್ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಇಂಡಿಯನ್ ಓವರ್ ಸೀಸ್ ಬ್ಯಾಂಕುಗಳನ್ನು ಪ್ರಾಯೋಗಿಕವಾಗಿ ಖಾಸಗೀಕರಣಗೊಳಿಸಲಾಗುತ್ತದೆ.
ಇನ್ನು ಈಗಾಗಲೇ ಕೇಂದ್ರ ಹಣಕಾಸು ಇಲಾಖೆಯ ಉನ್ನತಾಧಿಕಾರಿಗಳು ಸರ್ಕಾರಿ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಕಾರ್ಯದ ಬಗ್ಗೆ ಆರಂಭಿಕ ಹಂತದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ.