
ಬೆಂಗಳೂರು: ಚಿನ್ನ ಗಿರವಿ ಇಟ್ಟು ಸಾಲ ಪಡೆದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. 2 -3 ತಿಂಗಳ ಬಡ್ಡಿ ಮನ್ನಾ ಮಾಡುವ ಕುರಿತು ರಾಜ್ಯ ಆಭರಣ ವರ್ತಕರ ಒಕ್ಕೂಟ ಚಿಂತನೆ ನಡೆಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಂಘದ ಪ್ರಧಾನ ಕಾರ್ಯದರ್ಶಿ ಬಿ. ರಾಮಾಚಾರಿ ಅವರು, ಕೊರೋನಾ ಮೊದಲ ಅಲೆಯ ಸಂದರ್ಭದಲ್ಲಿ ಲಾಕ್ಡೌನ್ ಜಾರಿ ಮಾಡಿದ್ದರಿಂದ ಮಾನವೀಯತೆ ದೃಷ್ಟಿಯಿಂದ ಚಿನ್ನಾಭರಣ ಅಂಗಡಿ ಮಾಲೀಕರು ಗ್ರಾಹಕರ ಬಡ್ಡಿ ಮನ್ನಾ ಮಾಡಿದ್ದರು. ಅದೇ ರೀತಿ ಈ ಬಾರಿಯೂ ಬಡ್ಡಿ ಮನ್ನಾ ಮಾಡುವ ಚಿಂತನೆ ಇದೆ ಎಂದು ಹೇಳಿದ್ದಾರೆ.

ಚಿನ್ನದ ಮೇಲಿನ ಸಾಲದ 2 -3 ತಿಂಗಳ ಬಡ್ಡಿ ಮನ್ನಾ ಮಾಡುವ ಬಗ್ಗೆ ವರ್ತಕರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಬಡ, ಮಧ್ಯಮ ವರ್ಗದ ಕುಟುಂಬದವರು ವಿವಿಧ ಕಾರಣಗಳಿಂದ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ಕೊಂಡಿದ್ದಾರೆ. ಕೊರೋನಾ ಸಂಕಷ್ಟದ ಹಿನ್ನಲೆಯಲ್ಲಿ ಬಡ್ಡಿ ಮನ್ನಾ ಮಾಡುವ ಕುರಿತು ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.