alex Certify ಹಣ್ಣು – ತರಕಾರಿ ಮಾರಾಟ ಮಾಡಲಾಗದೆ ಸಂಕಷ್ಟದಲ್ಲಿದ್ದ ರೈತರಿಗೆ ಖುಷಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಣ್ಣು – ತರಕಾರಿ ಮಾರಾಟ ಮಾಡಲಾಗದೆ ಸಂಕಷ್ಟದಲ್ಲಿದ್ದ ರೈತರಿಗೆ ಖುಷಿ ಸುದ್ದಿ

ದೇಶದಾದ್ಯಂತ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಜನಜೀವನ ಸ್ಥಬ್ಧವಾಗಿದೆ. ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಹಳಿತಪ್ಪಿದ್ದು, ಇದರ ಪುನಶ್ಚೇತನಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ನಲ್ಲಿ ಕೆಲವೊಂದು ವಿನಾಯಿತಿಗಳನ್ನು ಘೋಷಿಸಿದೆ.

ರೈತರು ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲಿಸಿದ್ದು, ಇದರ ಜೊತೆಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ.

ರಾಜ್ಯದಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ 8 ಸಾವಿರಕ್ಕೂ ಅಧಿಕ ವಸತಿ ನಿಲಯಗಳಲ್ಲಿ ರೈತರು ಬೆಳೆದಂತಹ ಹಣ್ಣು ಮತ್ತು ತರಕಾರಿಗಳನ್ನು ನೇರವಾಗಿ ಖರೀದಿಸಲು ತೀರ್ಮಾನಿಸಲಾಗಿದೆ. ಹಾಪ್ ಕಾಮ್ಸ್ ನಿಗದಿಪಡಿಸುವ ದರಕ್ಕೆ ಇವುಗಳನ್ನು ಖರೀದಿಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...