ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಗನಕ್ಕೇರಿದೆ. ದೆಹಲಿ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹತ್ತು ಗ್ರಾಂಗೆ 1000 ರೂಪಾಯಿಗಳಿಗಿಂತ ಹೆಚ್ಚಾಗಿದೆ. ಬೆಳ್ಳಿಯ ಬೆಲೆ ಕೂಡ 1500 ರೂಪಾಯಿಗಳಿಗಿಂತ ಹೆಚ್ಚಾಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹೆಚ್ಚಾಗಿದೆ. ಚಿನ್ನದ ಬೆಲೆ 2000 ಡಾಲರ್ ಪ್ರತಿ ಓನ್ಸ್ ಆಗಿದೆ. ಚಿನ್ನದ ಬೆಲೆ 2020 ಡಾಲರ್ ಆಗುವ ಸಾಧ್ಯತೆ ಕಂಡು ಬರ್ತಿದೆ. ದೇಶಿ ಮಾರುಕಟ್ಟೆಯಲ್ಲೂ ಬಂಗಾರದ ಬೆಲೆ ನಿರಂತರ ಏರಿಕೆ ಕಾಣುವ ಸಾಧ್ಯತೆಯಿದೆ. ದೀಪಾವಳಿ ವೇಳೆಗೆ ಚಿನ್ನದ ಬೆಲೆ 10 ಗ್ರಾಂಗೆ 60 ಸಾವಿರ ಗಡಿ ದಾಟಲಿದೆ.
ಮಂಗಳವಾರ ದೆಹಲಿಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 53,674 ರೂಪಾಯಿಗಳಿಂದ 54,856 ರೂಪಾಯಿಗೆ ಏರಿಕೆ ಕಂಡಿದೆ. ಮುಂಬೈನಲ್ಲಿ ಶೇಕಡಾ 99.9 ರಷ್ಟು ಶುದ್ಧ ಚಿನ್ನದ ಬೆಲೆ ಹತ್ತು ಗ್ರಾಂಗೆ 53,894 ರೂಪಾಯಿಯಾಗಿದೆ. ಬೆಳ್ಳಿ ಬೆಲೆ ಕೆ.ಜಿಗೆ 72,547 ರೂಪಾಯಿಯಾಗಿದೆ.