ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಪುನರಾರಂಭಿಸುವಂತೆ ನೌಕರರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದಾರೆ.
ಆದರೆ ಈವರೆಗೆ ಈ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲದರ ಮಧ್ಯೆ ಸಾಮಾಜಿಕ ಜಾಲತಾಣ ಟ್ವಿಟ್ಟರ್ನಲ್ಲಿ ‘ರಿಸ್ಟೋರ್ ಓಲ್ಡ್ ಪೆನ್ಷನ್’ ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ಅಭಿಯಾನ ಆರಂಭಿಸಲಾಗಿದ್ದು, ಇದಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಗವರ್ನರ್ ರಘುರಾಮ್ ರಾಜನ್ ಕೂಡಾ ಇದನ್ನು ಬೆಂಬಲಿಸಿದ್ದು, ಹೊಸ ಪಿಂಚಣಿ ಯೋಜನೆ ಗೊಂದಲಮಯವಾಗಿದೆ. ಹೂಡಿಕೆ ಹಣ ವಾಪಸ್ಸಾಗುವ ಖಾತ್ರಿಯೂ ಇಲ್ಲವೆಂದು ತಿಳಿಸಿದ್ದಾರೆ. ಇನ್ನು ನಟಿ ಕಂಗನಾ ರಣಾವತ್ ಕೂಡಾ ಅಭಿಯಾನವನ್ನು ಬೆಂಬಲಿಸಿದ್ದಾರೆ.