ಕೊರೊನಾ ಮಹಾಮಾರಿಗೆ ಈಗಾಗಲೇ ಸಾಕಷ್ಟು ದೇಶಗಳು ಲಸಿಕೆ ಕಂಡು ಹಿಡಿಯುತ್ತಲೇ ಇವೆ. ಮಾನವನ ಮೇಲೂ ಪ್ರಯೋಗ ನಡೆಯುತ್ತಲೇ ಇದೆ. ಆದರೆ ಇಲ್ಲಿಯವರೆಗೂ ಯಾವುದೇ ಅಧಿಕೃತ ಲಸಿಕೆ ಅಥವಾ ಚುಚ್ಚುಮದ್ದು ಇನ್ನೂ ಮಾರುಕಟ್ಟೆಗೆ ಬಂದಿಲ್ಲ. ಆದರೆ ಕೆಲವೇ ದಿನಗಳಲ್ಲಿ ಲಸಿಕೆ ಸಿಗಲಿದೆ ಎಂದು ಹೇಳಲಾಗುತ್ತಿದೆ. ಈ ಬೆನ್ನಲ್ಲೇ ಇದೀಗ ರಿಲಯನ್ಸ್ ಇಂಡಸ್ಟ್ರೀಸ್ ಮಹತ್ವದ ಮಾಹಿತಿಯೊಂದನ್ನು ನೀಡಿದೆ.
ಹೌದು, ಕೊರೊನಾಗೆ ಎಲ್ಲೇ ಔಷಧ, ಲಸಿಕೆ ತಯಾರಾದರೂ ಅದನ್ನು ರಿಲಯನ್ಸ್ ಸಂಸ್ಥೆ ಭಾರತದಲ್ಲಿ ತಯಾರಿಸಲಿದೆ ಎಂದು ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ನಿರ್ದೇಶಕಿ ನೀತಾ ಅಂಬಾನಿ ಹೇಳಿದ್ದಾರೆ.
ಜನರ ಹಿತದೃಷ್ಟಿಯಿಂದ ಇಂತಹದೊಂದು ಕೆಲಸಕ್ಕೆ ಕೈ ಹಾಕುತ್ತಿದ್ದೇವೆ. ಈ ಮೂಲಕ ದೇಶದ ಜನರ ರಕ್ಷಣೆ ಮಾಡಬೇಕಾಗಿದೆ. ಹಾಗೂ ತಮಗೆ ಇಂತಹದೊಂದು ಕೆಲಸ ಮಾಡುವ ಮೂಲಕ ಅವರ ಸೇವೆ ಮಾಡಲು ಅವಕಾಶ ಸಿಕ್ಕಿದೆ ಎಂದು ಹೇಳಿದ್ದಾರೆ.