ನವದೆಹಲಿ: ಕನಿಷ್ಠ ದಾಖಲೆ ಪಡೆದು ಗ್ಯಾಸ್ ವಿತರಣೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಪೆಟ್ರೋಲಿಯಂ ಸಚಿವಾಲಯದ ಕಾರ್ಯದರ್ಶಿ ತರುಣ್ ಕಪೂರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಹೊಸ ಗ್ಯಾಸ್ ಸಂಪರ್ಕ ಪಡೆಯಲು ಇರುವ ಪ್ರಕ್ರಿಯೆಯಲ್ಲಿ ಕೆಲವೊಂದು ಬದಲಾವಣೆ ಮಾಡಲಾಗುವುದು. ಕನಿಷ್ಠ ದಾಖಲೆ ಪತ್ರ ಪಡೆದು ಅಡುಗೆ ಅನಿಲ ಸಂಪರ್ಕ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮುಂದಿನ ಎರಡು ವರ್ಷದಲ್ಲಿ ದೇಶದಲ್ಲಿ 1 ಕೋಟಿ ಉಚಿತ ಅಡುಗೆ ಅನಿಲ ಸಂಪರ್ಕ ಒದಗಿಸಲು ಯೋಜಿಸಲಾಗಿದೆ. ಇದರೊಂದಿಗೆ ದೇಶದಲ್ಲಿ ಶೇಕಡ 100 ರಷ್ಟು ಶುದ್ಧ ಇಂಧನ ಬಳಕೆ, ಅಡುಗೆ ಅನಿಲ ಸಂಪರ್ಕ ಜಾಲ ವಿಸ್ತರಿಸಲು ತೀರ್ಮಾನಿಸಲಾಗಿದೆ.
ಸುಲಭವಾಗಿ ಅಡುಗೆ ಅನಿಲ ಸಂಪರ್ಕ ಪಡೆಯಲು ಅನುಕೂಲವಾಗುವಂತೆ ಕ್ರಮಕೈಗೊಳ್ಳಲಾಗಿದ್ದು ವಿಳಾಸ ದೃಢೀಕರಣ ದಾಖಲೆಪತ್ರ ವಿಚಾರದಲ್ಲಿ ಕನಿಷ್ಠ ದಾಖಲೆ ಪಡೆದು ಗ್ಯಾಸ್ ಸಂಪರ್ಕ ನೀಡಲಾಗುವುದು. ಮನೆ ಸಮೀಪದ ಡೀಲರ್ ಗಳಿಂದಲೂ ಗ್ಯಾಸ್ ರಿಫಿಲ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ.
ಕಳೆದ ನಾಲ್ಕು ವರ್ಷದ ಅವಧಿಯಲ್ಲಿ 8 ಕೋಟಿ ಬಡ ಮಹಿಳೆಯರಿಗೆ ಉಚಿತವಾಗಿ ಎಲ್ಪಿಜಿ ಸಂಪರ್ಕ ನೀಡಿದ್ದು, ಇನ್ನೂ ಒಂದು ಕೋಟಿ ಉಚಿತ ಅಡುಗೆ ಅನಿಲ ಸಂಪರ್ಕ ಒದಗಿಸಲಾಗುವುದು ಎಂದು ಹೇಳಲಾಗಿದೆ.