ಹತ್ತು ಲಕ್ಷ ರೂಪಾಯಿಯ ಒಳಗೆ ಮನೆ ನಿರ್ಮಿಸಿ ಕೊಳ್ಳುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಇಂತಹ ಮನೆಗಳಿಗೆ ಕಡಿಮೆ ದರದಲ್ಲಿ ಸುಲಭವಾಗಿ ಮರಳು ಸಿಗುವಂತೆ ವ್ಯವಸ್ಥೆ ಮಾಡಲಿದೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಬೆಳಗಾವಿಯಲ್ಲಿ ಈ ವಿಷಯ ತಿಳಿಸಿದ್ದು, ಸರ್ಕಾರದ ಈ ನಿರ್ಧಾರದಿಂದಾಗಿ ಬಡ ಜನತೆಗೆ ಅನುಕೂಲವಾಗಲಿದೆ ಎಂದರು.
ಚಿನ್ನಾಭರಣ ಪ್ರಿಯರಿಗೆ ಭರ್ಜರಿ ಸುದ್ದಿ: ಸರ್ಕಾರದಿಂದಲೇ ಜ್ಯುವೆಲ್ಲರಿ ಮಳಿಗೆ ಶುರು
ಇನ್ನು 10 ಲಕ್ಷ ರೂಪಾಯಿಗಳಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣವಾಗುವ ಕಟ್ಟಡಗಳಿಗೆ ಪರವಾನಗಿ ನೀಡುವ ಸಂದರ್ಭದಲ್ಲಿಎಷ್ಟು ಮರಳು ಬಳಕೆ ಆಗುತ್ತದೆ ಎಂಬುದರ ಆಧಾರದ ಮೇಲೆ ತೆರಿಗೆ ನಿಗದಿಪಡಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.