ದೇಶದ ಆಟೋಮೊಬೈಲ್ ಉದ್ಯಮದಲ್ಲಿ ಮಾರುತಿ ಸುಜುಕಿ ದೊಡ್ಡ ಹೆಸರು. ಆದರೆ ಕಳೆದ ಕೆಲವು ತಿಂಗಳುಗಳಿಂದ ವಾಹನೋದ್ಯಮ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಇದರ ಮಧ್ಯೆ ಕೊರೊನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾದ ಲಾಕ್ಡೌನ್, ಈ ಉದ್ಯಮದ ಆರ್ಥಿಕ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿತು.
ಹೀಗಾಗಿ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ಕಂಪನಿ, ಹದಿನೇಳು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ತ್ರೈಮಾಸಿಕದಲ್ಲಿ ನಷ್ಟ ಅನುಭವಿಸಿರುವ ಮಾಹಿತಿ ಹೊರಬಿದ್ದಿದೆ.
ಜೂನ್ ತಿಂಗಳಿನಲ್ಲಿ ಕೊನೆಗೊಂಡ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಮಾರುತಿ ಸುಜುಕಿಯು ಸುಮಾರು 268.3 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದು, ಕಳೆದ ವರ್ಷ ಇದೇ ತ್ರೈಮಾಸಿಕದಲ್ಲಿ ಬರೋಬ್ಬರಿ 1,376.8 ಕೋಟಿ ರೂಪಾಯಿ ಲಾಭ ಗಳಿಸಿತ್ತು ಎಂಬುದು ಗಮನಾರ್ಹ ಸಂಗತಿ.