ನವದೆಹಲಿ: ಆಧಾರ್ ಕಾರ್ಡ್ ಜೋಡಣೆ ಮಾಡದ 1.8 ಕೋಟಿ ಪಾನ್ ಕಾರ್ಡ್ ಗಳು ನಿಷ್ಕ್ರಿಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನಿಗದಿತ ದಿನಾಂಕದೊಳಳಗೆ ಆಧಾರ್ ಸಂಖ್ಯೆಗೆ ಜೋಡಣೆಯಾಗದ 1.8 ಕೋಟಿ ಪಾನ್ ಕಾರ್ಡ್ ಗಳನ್ನು ನಿಷ್ಕ್ರಿಯಗೊಳಿಸಲು ಆದಾಯ ತೆರಿಗೆ ಇಲಾಖೆ ತೆರಿಗೆ ಚಿಂತಿಸಿದೆ ಎನ್ನಲಾಗಿದೆ. ಒಬ್ಬರು ಅನೇಕ ಪಾನ್ ನಂಬರ್ ಗಳನ್ನು ನಮೂದಿಸಿ ವಂಚಿಸುತ್ತಿದ್ದರು. ಇದನ್ನು ತಡೆಯುವ ಉದ್ದೇಶದಿಂದ ಆಧಾರ್ ಜೋಡಣೆ ಮಾಡಲು ಸೂಚಿಸಲಾಗಿತ್ತು.
ಅಲ್ಲದೆ, ಕೆಲವು ಪಾನ್ ಕಾರ್ಡ್ ಹೊಂದಿ ಆದಾಯ ತೆರಿಗೆ ಪಾವತಿಸುತ್ತಿದ್ದರೂ, ಆಧಾರ್ ಕಾರ್ಡ್ ಬಳಸಿಕೊಂಡು ಬಡವರಿಗಾಗಿ ಇರುವ ಯೋಜನೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದರು. ಈಗ ಆಧಾರ್ ಮೂಲಕ ವಹಿವಾಟಿನ ಮೇಲೆ ನಿಗಾವಹಿಸಲಾಗಿದ್ದು ಹೆಚ್ಚಿನ ಮೊತ್ತದ ವಹಿವಾಟು ನಡೆಸುವ ಖಾತೆದಾರರ ಮಾಹಿತಿಯನ್ನು ವಿವಿಧ ಬ್ಯಾಂಕುಗಳು ಸೇರಿದಂತೆ ವಿವಿಧ ಹಣಕಾಸು ಸಂಸ್ಥೆಗಳಿಂದ ಆದಾಯ ತೆರಿಗೆ ಇಲಾಖೆ ಪಡೆದುಕೊಂಡಿದೆ.
ಪಾನ್ ಕಾರ್ಡ್ ಆಧಾರ್ ಜೋಡಣೆ ಮಾಡಿದವರು ಅಕ್ರಮ ನಡೆಸಲು ಅವಕಾಶ ಇರುವುದಿಲ್ಲ. ದೇಶದ 130 ಕೋಟಿ ಜನರಲ್ಲಿ 1.5 ಕೋಟಿ ಜನರು ಮಾತ್ರ ಆದಾಯ ತೆರಿಗೆ ವ್ಯಾಪ್ತಿಗೆ ಬರುತ್ತಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಹೆಚ್ಚಿನ ಮೊತ್ತದ ವಹಿವಾಟು ನಡೆಸುವವರ ಮೇಲೆ ನಿಗಾ ವಹಿಸಿದೆ ಎಂದು ಹೇಳಲಾಗಿದೆ.