alex Certify ಆಧಾರ್ ಜೋಡಣೆ ಮಾಡದ 180 ಮಿಲಿಯನ್ ಪಾನ್ ಕಾರ್ಡ್ ನಿಷ್ಕ್ರಿಯ ಸಾಧ್ಯತೆ – ಹೆಚ್ಚಿನ ವಹಿವಾಟು ನಡೆಸಿದವರಿಗೆ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಧಾರ್ ಜೋಡಣೆ ಮಾಡದ 180 ಮಿಲಿಯನ್ ಪಾನ್ ಕಾರ್ಡ್ ನಿಷ್ಕ್ರಿಯ ಸಾಧ್ಯತೆ – ಹೆಚ್ಚಿನ ವಹಿವಾಟು ನಡೆಸಿದವರಿಗೆ ಶಾಕ್

ನವದೆಹಲಿ: ನಿಗದಿತ ದಿನಾಂಕದೊಳಳಗೆ ಆಧಾರ್ ಕಾರ್ಡ್ ಜೋಡಣೆ ಮಾಡದ 1.8 ಕೋಟಿ ಪಾನ್ ಕಾರ್ಡ್ ಗಳು ನಿಷ್ಕ್ರಿಯವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಆಧಾರ್ ಸಂಖ್ಯೆಗೆ ಜೋಡಣೆಯಾಗದ 1.8 ಕೋಟಿ ಪಾನ್ ಕಾರ್ಡ್ ಗಳನ್ನು ನಿಷ್ಕ್ರಿಯಗೊಳಿಸಲು ಆದಾಯ ತೆರಿಗೆ ಇಲಾಖೆ ತೆರಿಗೆ ಚಿಂತಿಸಿದೆ ಎಂದು ಹೇಳಲಾಗಿದೆ. ಒಬ್ಬರು ಅನೇಕ ಪಾನ್ ನಂಬರ್ ಗಳನ್ನು ಪಡೆದು ವಂಚಿಸುತ್ತಿದ್ದರು. ಇದನ್ನು ತಡೆಯುವ ಉದ್ದೇಶದಿಂದ ಆಧಾರ್ ಜೋಡಣೆ ಮಾಡಲು ಸೂಚಿಸಲಾಗಿತ್ತು.

ಕೆಲವರು ಪಾನ್ ಕಾರ್ಡ್ ಹೊಂದಿ ಆದಾಯ ತೆರಿಗೆ ಪಾವತಿಸುತ್ತಿದ್ದರೂ, ಆಧಾರ್ ಕಾರ್ಡ್ ಬಳಸಿಕೊಂಡು ಬಡವರಿಗಾಗಿ ಇರುವ ಯೋಜನೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ಆಧಾರ್ ಮೂಲಕ ವಹಿವಾಟಿನ ಮೇಲೆ ನಿಗಾವಹಿಸಲಾಗಿದ್ದು ಹೆಚ್ಚಿನ ಮೊತ್ತದ ವಹಿವಾಟು ನಡೆಸುವ ಖಾತೆದಾರರ ಮಾಹಿತಿಯನ್ನು ವಿವಿಧ ಬ್ಯಾಂಕ್  ಸೇರಿದಂತೆ ವಿವಿಧ ಹಣಕಾಸು ಸಂಸ್ಥೆಗಳಿಂದ ಆದಾಯ ತೆರಿಗೆ ಇಲಾಖೆ ಪಡೆದುಕೊಂಡಿದೆ.

ಪಾನ್ ಕಾರ್ಡ್ ಆಧಾರ್ ಜೋಡಣೆ ಮಾಡಿದವರು ಅಕ್ರಮ ನಡೆಸಲು ಅವಕಾಶ ಇರುವುದಿಲ್ಲ. ದೇಶದ 130 ಕೋಟಿ ಜನರಲ್ಲಿ 1.5 ಕೋಟಿ ಜನರು ಮಾತ್ರ ಆದಾಯ ತೆರಿಗೆ ವ್ಯಾಪ್ತಿಗೆ ಬರುತ್ತಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಹೆಚ್ಚಿನ ಮೊತ್ತದ ವಹಿವಾಟು ನಡೆಸುವವರ ಮೇಲೆ ನಿಗಾ ವಹಿಸಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...