ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ಮತ್ತು ಕರ್ನಾಟಕ ಸರ್ಕಾರದ ನಡುವೆ ಒಡಂಬಡಿಕೆ ಆಗಿದೆ.
ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಘಟಕವನ್ನು ವಿಸ್ತರಿಸಲು ಒಡಂಬಡಿಕೆ ಮಾಡಿಕೊಳ್ಳಲಾಗಿದೆ. 3300 ಕೋಟಿ ರೂಪಾಯಿ ಹೂಡಿಕೆಯಾಗಲಿದ್ದು, ಹೊಸದಾಗಿ ಎರಡು ಸಾವಿರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ, ಟೊಯೋಟಾ ಕಿರ್ಲೋಸ್ಕರ್ ಎಂಡಿ ಮಸಕಾಜು ಯೋಶಿಮುರ, ಗೀತಾಂಜಲಿ ಗಿರ್ಲೋಸ್ಕರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.