ಬೆಂಗಳೂರು : 545 PSI ಜೊತೆ ಖಾಲಿ ಇರುವ 400 ಪೋಸ್ಟ್ ಗಳಿಗೂ ಒಟ್ಟಿಗೆ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
PSI ಅಭ್ಯರ್ಥಿಗಳ ಮರು ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ನಮ್ಮ ಅಡ್ವಕೇಟ್ ಜನರಲ್ ಜೊತೆ ನಾನು ಮಾತನಾಡಿದ್ದೇನೆ, ಸ್ವತಂತ್ರ ಸಂಸ್ಥೆಯಿಂದ ಬೇಗ ಪರೀಕ್ಷೆ ನಡೆಸಲು ಕೋರ್ಟ್ ಹೇಳಿದೆ. ಆದೇಶದ ಪ್ರತಿ ನಮ್ಮ ಕೈ ಸೇರಿದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.545 ಹುದ್ದೆಗಳ ಜೊತೆಗೆ ಇನ್ನೂ 400 ಪಿಎಸ್ಐ ಪೋಸ್ಟ್ ಖಾಲಿ ಇದೆ. ಪರೀಕ್ಷೆಯನ್ನು ಹೇಗೆ ಮಾಡಬೇಕು..? ಒ್ಟಿಗೆ ಮಾಡಬೇಕೋ ಅಥವಾ ಪ್ರತ್ಯೇಕವಾಗಿ ಮಾಡಬೇಕೋ ಎಂಬುದರ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
545 ಪಿಎಸ್ಐ ಹುದ್ದೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ ಹೊರಡಿಸಿದೆ.. ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಪೊಲೀಸ್ ಸಬ್ಇನ್ಸ್ಪೆಕ್ಟರ್ ನೇಮಕಾತಿ ಮರು ಪರೀಕ್ಷೆಗೆ ಆದೇಶಿಸಿದ್ದ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದತಿ ಕೋರಿರುವ ಅರ್ಜಿಗಳಿಗೆ ಸಂಬಂಧಿಸಿದ ಬಹುನಿರೀಕ್ಷಿತ ಆದೇಶವನ್ನು ಹೈಕೋರ್ಟ್ ನಿನ್ನೆ ಪ್ರಕಟಿಸಿದೆ.