ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮುಂದಿನ ವರ್ಷದೊಳಗೆ 80 ಲಕ್ಷ ಮನೆಗಳ ನಿರ್ಮಾಣಕ್ಕೆ ಯೋಜಿಸಲಾಗಿದೆ. ಬಡವರಿಗೆ 80 ಲಕ್ಷ ಮನೆಗಳ ನಿರ್ಮಾಣಕ್ಕೆ ಬಜೆಟ್ ನಲ್ಲಿ 48 ಸಾವಿರ ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.
ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮುಂದಿನ ಹಣಕಾಸು ವರ್ಷದಲ್ಲಿ 80 ಲಕ್ಷ ಮನೆಗಳ ನಿರ್ಮಾಣ ಗುರಿ ಹೊಂದಲಾಗಿದ್ದು, 48 ಸಾವಿರ ಕೋಟಿ ರೂಪಾಯಿ ನೀಡಲಾಗಿದೆ. ಆರ್ಥಿಕವಾಗಿ ಹಿಂದುಳಿದ ಮತ್ತು ಬಡತನ ರೇಖೆಗಿಂತ ಕೆಳಗಿನ ವರ್ಗದ ಜನರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರಗಳು ಈ ಯೋಜನೆಗಾಗಿ ಅನುದಾನ ಬಳಸಿಕೊಂಡು ವಸತಿ ನಿರ್ಮಾಣಕ್ಕೆ ಸೂಕ್ತ ಜಾಗ ಗುರುತಿಸಿ ಬಡವರಿಗೆ ಮನೆ ಒದಗಿಸಬೇಕು ಎಂದು ಹೇಳಿದ್ದಾರೆ.