ಶಿವಮೊಗ್ಗ : ರೈಲ್ವೆ ಕಾಮಗಾರಿಗೆ ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕಿ ಮೃತಪಟ್ಟ ಘಟನೆ ಶಿವಮೊಗ್ಗದ ಕೋಟೆಗಂಗೂರಿನಲ್ಲಿ ನಡೆದಿದೆ.
ಮೃತ ಬಾಲಕಿಯನ್ನು 5 ನೇ ತರಗತಿ ಓದುತ್ತಿದ್ದ ಚೈತ್ರಾ ಎಂದು ಗುರುತಿಸಲಾಗಿದೆ. ಬಾಲಕಿ ರೈಲ್ವೆ ಟರ್ಮಿನಲ್ ನಿರ್ಮಾಣಕ್ಕಾಗಿ ತೆಗೆದಿದ್ದ ಗುಂಡಿಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಶಾಲೆ ಬಿಟ್ಟು ಬಂದ ಬಾಲಕಿ ಹೊಲಕ್ಕೆ ಹೋಗಿ ಅಪ್ಪ ಅಮ್ಮನನ್ನು ನೋಡಿ ವಾಪಸ್ ಮನೆಗೆ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ರಸ್ತೆ ನಡುವೆ ಗುಂಡಿ ತೆಗೆದು ಮುಚ್ಚದೇ ಇರುವುದರಿಂದ, ಯಾವುದೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳದ ಹಿನ್ನೆಲೆ ಘಟನೆ ನಡೆದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.