ಕಲಬುರಗಿ : ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದು ವಿದ್ಯಾ ರ್ಥಿನಿಗೆ ಗಂಭೀರ ಗಾಯವಾದ ಘಟನೆ ಕಲಬುರಗಿ ತಾಲೂಕಿನ ಅಫಜಲಪುರದ ಚಿಮಣಗೇರಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
2 ನೇ ತರಗತಿ ವಿದ್ಯಾರ್ಥಿನಿ ಮಹಂತಮ್ಮಗೆ ಗಂಭೀರ ಗಾಯಗಳಾಗಿದ್ದು, ಬಾಲಕಿಯನ್ನು ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇಂದು ಮಧ್ಯಾಹ್ನ ಬಿಸಿಯೂಟ ತಯಾರು ಮಾಡುತ್ತಿದ್ದಾಗ ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಾಲಕಿ ಬಿದ್ದಿದ್ದಾಳೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಶಿಕ್ಷಕರು, ಸಿಬ್ಬಂದಿಗಳ ನಿರ್ಲಕ್ಷಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.