ನವದೆಹಲಿ: ಗ್ರಾಮೀಣ ಪ್ರದೇಶದಲ್ಲಿ ಸಣ್ಣ ಹೂಡಿಕೆ ಉತ್ತೇಜಿಸುವ ಉದ್ದೇಶದಿಂದ ಕೆವೈಸಿ ನಿಯಮಗಳನ್ನು ಸರಳೀಕರಣ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಗ್ರಾಮಾಂತರ ಪ್ರದೇಶದ ಜನರಲ್ಲಿ ಹೆಚ್ಚಿನ ಮಟ್ಟದ ಹೂಡಿಕೆ ಆಕರ್ಷಿಸುವ ಉದ್ದೇಶದಿಂದ ಪಾನ್ ಕಾರ್ಡ್ ಬದಲಿಗೆ ಆಧಾರ್ ಕಾರ್ಡ್ ಬಳಸಲು ಚಿಂತನೆ ನಡೆದಿದೆ. ಸಣ್ಣ ಉಳಿತಾಯ ಯೋಜನೆಗಳಾದ ಸುಕನ್ಯಾ ಸಮೃದ್ಧಿ, ಎನ್.ಎಸ್.ಸಿ., ಪಿಎಫ್, ಎಸ್,ಸಿ.ಎಸ್.ಎಸ್. ಗಳಲ್ಲಿ ಆಧಾರ್ ಕಾರ್ಡ್ ಬಳಸಿಕೊಂಡು ಹೂಡಿಕೆ ಮಾಡಲು ಹೊಸ ವ್ಯವಸ್ಥೆ ರೂಪಿಸಲು ಹಣಕಾಸು ಸಚಿವಾಲಯ ಮುಂದಾಗಿದೆ.
ಯಾವುದೇ ಕಾನೂನು ತೊಡಕು ಇಲ್ಲದೆ ಮೃತಪಟ್ಟ ಠೇವಣಿದಾರರ ಹಣವನ್ನು ಅವರ ಉತ್ತರಾಧಿಕಾರಿಗಳಿಗೆ ಸುಲಭವಾಗಿ ಹಸ್ತಾಂತರ ಮಾಡುವ ನಿಟ್ಟಿನಲ್ಲಿ ನಿಯಮಗಳನ್ನು ಸರಳೀಕರಣ ಮಾಡಲು ತೀರ್ಮಾನಿಸಲಾಗಿದೆ. ಇದರೊಂದಿಗೆ ನಾಮಿನೇಷನ್ ಪ್ರಕ್ರಿಯೆಯನ್ನು ಸುಲಭಗೊಳಿಸಲು ಕೂಡ ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.