ನವದೆಹಲಿ: ಆಧಾರ್ ಕಾರ್ಡ್ ಹೊಂದಿದವರಿಗೆ ಮತ್ತೊಂದು ಮುಖ್ಯವಾದ ಮಾಹಿತಿ ಇಲ್ಲಿದೆ. ಆಧಾರ್ ಕಾರ್ಡ್ ನಲ್ಲಿ ಮೊಬೈಲ್ ಸಂಖ್ಯೆ ತಪ್ಪಾಗಿದ್ದಲ್ಲಿ ಮನೆಬಾಗಿಲಲ್ಲಿಯೇ ಪೋಸ್ಟ್ ಮ್ಯಾನ್ ಸಹಾಯದಿಂದ ಸರಿಪಡಿಸುವ ಅವಕಾಶ ಕಲ್ಪಿಸಲಾಗಿದೆ.
ಆಧಾರ್ ಹೊಂದಿದವರ ಮೊಬೈಲ್ ಸಂಖ್ಯೆ ಅಪ್ಡೇಟ್ ಮಾಡಲು ಭಾರತೀಯ ಅಂಚೆ ಪೇಮೆಂಟ್ಸ್ ಬ್ಯಾಂಕ್(IPPB) ಮತ್ತು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ(UIDAI) ಒಪ್ಪಂದ ಮಾಡಿಕೊಂಡಿವೆ.
ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ನ 650 ಶಾಖೆಗಳು ಮತ್ತು 1.46 ಲಕ್ಷ ಪೋಸ್ಟ್ ಮ್ಯಾನ್ ಗಳು ಹಾಗೂ ಗ್ರಾಮೀಣ ಅಂಚೆ ಸೇವಕರ ಮೂಲಕ ಮನೆಬಾಗಿಲಲ್ಲಿಯೇ ಸೇವೆ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಲಾಗಿದೆ.