ನವದೆಹಲಿ: ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೋಡಣೆಗೆ ಜೂನ್ 30 ಕೊನೆಯ ದಿನವಾಗಿದೆ. ಈ ಮೊದಲು ಮಾರ್ಚ್ ಅಂತ್ಯದವರೆಗೆ ಅವಕಾಶ ನೀಡಲಾಗಿತ್ತು.
ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ್ದರಿಂದ ಜೂನ್ 30 ರವರೆಗೆ ದಿನಾಂಕ ವಿಸ್ತರಿಸಲಾಗಿದೆ. ಜುಲೈ ಅಂತ್ಯದೊಳಗೆ ಪಾನ್ ಕಾರ್ಡ್ ಗೆ ಆಧಾರ್ ಜೋಡಣೆ ಮಾಡದಿದ್ದರೆ ಪಾನ್ ಕಾರ್ಡ್ ಮಾನ್ಯತೆ ರದ್ದಾಗಲಿದೆ ಎಂದು ಹೇಳಲಾಗಿದೆ.
ಹಲವು ಸಲ ಪಾನ್ ಕಾರ್ಡ್ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಲು ಗಡುವು ನೀಡಿ ವಿಸ್ತರಿಸಲಾಗಿದ್ದು, ಈಗ ಜೂನ್ 30 ಕೊನೆ ದಿನವಾಗಿದೆ.