ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತದ ನಂತರ ದೇಶದ 22 ರಾಜ್ಯಗಳಲ್ಲಿ ಇಂಧನ ದರ ಇಳಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಕರ್ನಾಟಕದಲ್ಲಿ ಡೀಸೆಲ್ ದರವನ್ನು ಅತಿ ಹೆಚ್ಚು ಇಳಿಕೆ ಮಾಡಲಾಗಿದೆ. ಪ್ರತಿ ಲೀಟರ್ ಗೆ 19.49 ರೂ. ಇಳಿಕೆಯಾಗಿದೆ. ಕರ್ನಾಟಕದಲ್ಲಿ ಅತಿ ಹೆಚ್ಚು ಅಂದರೆ ಒಂದು ಲೀಟರ್ ಪೆಟ್ರೋಲ್ ಗೆ 13.35 ರೂಪಾಯಿ ಇಳಿಕೆ ಮಾಡಲಾಗಿದೆ.
ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ದರ ಇಳಿಕೆ ಮಾಡಿಲ್ಲ. ಕೇಂದ್ರಾಡಳಿತ ಪ್ರದೇಶ ಸೇರಿ 14 ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ದರವನ್ನು ಇಳಿಕೆ ಮಾಡಿಲ್ಲವೆಂದು ಕೇಂದ್ರ ಸರ್ಕಾರ ತಿಳಿಸಿದೆ.
ಕೇಂದ್ರ ಸರ್ಕಾರ ಪೆಟ್ರೋಲ್ ಮೇಲೆ 5 ರೂ., ಡೀಸೆಲ್ ಮೇಲೆ 10 ರೂಪಾಯಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ 7 ರೂ. ವ್ಯಾಟ್ ಕಡಿತಗೊಳಿಸಿದೆ. ಇದರಿಂದಾಗಿ ದೇಶದಲ್ಲಿಯೇ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಅತಿ ಕಡಿಮೆಯಾಗಿದೆ ಎಂದು ಹೇಳಲಾಗಿದೆ.