alex Certify
ಕನ್ನಡ ದುನಿಯಾ       Mobile App
       

Kannada Duniya

ಏರ್ಟೆಲ್, ವೊಡಾಫೋನ್ ಐಡಿಯಾ ಕಂಪನಿಗಳಿಗೆ ʼಬಿಗ್ ಶಾಕ್ʼ

ನವದೆಹಲಿ: ಟೆಲಿಕಾಂ ಕಂಪನಿಗಳು ಬಾಕಿ ಉಳಿಸಿಕೊಂಡ ಮೊತ್ತವನ್ನು ಪಾವತಿಸುವಂತೆ ಸುಪ್ರೀಂಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.

ಇದರ ಬೆನ್ನಲ್ಲೇ ಇಂದು ರಾತ್ರಿ 11 ಗಂಟೆ 59 ನಿಮಿಷದೊಳಗೆ ಎಲ್ಲಾ ಹಣವನ್ನು ಸಂದಾಯ ಮಾಡುವಂತೆ ಭಾರತೀಯ ದೂರಸಂಪರ್ಕ ಇಲಾಖೆಯ ವತಿಯಿಂದ ಭಾರ್ತಿ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ಕಂಪನಿಗಳಿಗೆ ನೋಟಿಸ್ ಜಾರಿಮಾಡಲಾಗಿದೆ.

ಭಾರ್ತಿ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ಕಂಪನಿಗಳು 92 ಸಾವಿರ ಕೋಟಿ ರೂಪಾಯಿ ಮೌಲ್ಯದ ಸರಿ ಹೊಂದಿಸಲ್ಪಟ್ಟ ಒಟ್ಟು ಆದಾಯ(AGR) ಶುಲ್ಕವನ್ನು ಬಾಕಿ ಉಳಿಸಿಕೊಂಡಿದ್ದು ಇದನ್ನು ಸರ್ಕಾರಕ್ಕೆ ಪಾವತಿಸಬೇಕಿದೆ.

ಏರ್ಟೆಲ್ ಮತ್ತು ವೊಡಾಫೋನ್, ಐಡಿಯಾ ಕಂಪನಿಗಳು ಬಾಕಿ ಉಳಿಸಿಕೊಂಡ 1.47 ಲಕ್ಷ ಕೋಟಿ ರೂಪಾಯಿ ಎಜಿಆರ್ ಶುಲ್ಕವನ್ನು ಮರುಪಾವತಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಹಿಂದೆ ನೀಡಿದ್ದ ನ್ಯಾಯಾಲಯದ ಆದೇಶವನ್ನು ಪಾಲಿಸದೆ ಹಣ ಪಾವತಿಸದ ಕಾರಣಕ್ಕೆ ಟೆಲಿಕಾಂ ಕಂಪನಿಗಳ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದ್ದು ಮಾರ್ಚ್ 17 ರೊಳಗೆ ವಿವರಣೆ ನೀಡುವಂತೆ ಸೂಚಿಸಲಾಗಿದೆ.

ಹಣ ಪಾವತಿಸದ ಕಂಪನಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗದು ಎಂಬ ದೂರಸಂಪರ್ಕ ಇಲಾಖೆಯ ಹೇಳಿಕೆಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಇದರ ಬೆನ್ನಲ್ಲೇ ದೂರಸಂಪರ್ಕ ಇಲಾಖೆಯಿಂದ ಆದೇಶ ಹಿಂಪಡೆದು ಎಲ್ಲ ಬಾಕಿ ಹಣ ಸಂದಾಯ ಮಾಡುವಂತೆ ಏರ್ಟೆಲ್, ವೊಡಾಫೋನ್ ಐಡಿಯಾ ಕಂಪನಿಗಳಿಗೆ ನೋಟಿಸ್ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉಳಿದ ಅವಧಿಯನ್ನು ಪೂರೈಸಲಿದೆಯಾ...?

    View Results

    Loading ... Loading ...