ನವದೆಹಲಿ: ಈರುಳ್ಳಿ ಬೆಲೆ ಏರಿಕೆ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, 2024ರ ಲೋಕಸಭೆ ಚುನಾವಣೆಗೆ ಮುನ್ನ ಮುಂದಿನ ವರ್ಷ ಮಾರ್ಚ್ ವರೆಗೆ ಈರುಳ್ಳಿ ರಫ್ತು ನಿಷೇಧಿಸಿದೆ.
ದೇಶಿಯ ಲಭ್ಯತೆ ಹೆಚ್ಚಿಸುವುದು, ಬೆಲೆ ಏರಿಕೆ ನಿಯಂತ್ರಣ ಉದ್ದೇಶದಿಂದ 2024ರ ಮಾರ್ಚ್ ವರೆಗೆ ಕೇಂದ್ರ ಸರ್ಕಾರ ಈರುಳ್ಳಿ ರಫ್ತು ನಿಷೇಧಿಸಿದೆ. ಈರುಳ್ಳಿಯ ರಫ್ತು ನೀತಿಯಲ್ಲಿ ತಿದ್ದುಪಡಿ ಮಾಡಲಾಗಿದ್ದು, 2024ರ ಮಾರ್ಚ್ 31ರವರೆಗೆ ರಫ್ತು ನಿಷೇಧಿಸಲಾಗಿದೆ ಎಂದು ವಿದೇಶ ವ್ಯವಹಾರ ಪ್ರಧಾನ ನಿರ್ದೇಶನಾಲಯ ತಿಳಿಸಿದೆ.
ದೆಹಲಿಯಲ್ಲಿ ಕೆಜಿ ಈರುಳ್ಳಿ ದರ 70- 80ರೂ.ಗೆ ಮಾರಾಟವಾಗುತ್ತಿದೆ. ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಅಕ್ಟೋಬರ್ ನಲ್ಲಿ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ 25 ರೂ.ನಂತೆ ಮಾರಾಟ ಮಾಡಲಾಗಿತ್ತು.