alex Certify BIG NEWS: ಸೈಬರ್ ದಾಳಿ ಕುರಿತಂತೆ ಗ್ರಾಹಕರಿಗೆ ಎಚ್ಚರಿಕೆ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೈಬರ್ ದಾಳಿ ಕುರಿತಂತೆ ಗ್ರಾಹಕರಿಗೆ ಎಚ್ಚರಿಕೆ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ದೇಶದ ಅತಿ ದೊಡ್ಡ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದೆ. ಸುಮಾರು 20 ಲಕ್ಷ ಗ್ರಾಹಕರ ಖಾತೆಗೆ ಸೈಬರ್ ವಂಚಕರು ಕನ್ನ ಹಾಕುವ ಸಾಧ್ಯತೆಯಿದ್ದು, ಈ ಹಿನ್ನಲೆಯಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ದೇಶದಲ್ಲಿ ಹೆಚ್ಚಾಗುತ್ತಿರುವ ಕೊರೊನಾವನ್ನೇ ವಂಚಕರು ತಮ್ಮ ಬಂಡವಾಳವನ್ನಾಗಿ ಬಳಸಿಕೊಳ್ಳುತ್ತಿದ್ದು, ಉಚಿತ ಕೋವಿಡ್-19 ಟೆಸ್ಟ್ ಮಾಡುವುದಾಗಿ ಸರ್ಕಾರದ ವತಿಯಿಂದಲೇ ಕಳಿಸಲಾಗುತ್ತಿದೆ ಎಂಬಂತೆ ಬಿಂಬಿಸುವ ಇ-ಮೇಲ್ ರವಾನಿಸಿ ವಂಚನೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ಈಗಾಗಲೇ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತದ ಸೈಬರ್ ಸೆಕ್ಯೂರಿಟಿ ಏಜೆನ್ಸಿ ಸಹ ಇದೇ ರೀತಿಯ ಎಚ್ಚರಿಕೆಯನ್ನು ನೀಡಿದೆ. ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ದೆಹಲಿ, ಮುಂಬೈ, ಹೈದರಾಬಾದ್, ಚೆನ್ನೈ ಅಹ್ಮದಾಬಾದ್ ಸೇರಿದಂತೆ ಪ್ರಮುಖ ನಗರಗಳಲ್ಲಿನ ತನ್ನ ಬ್ಯಾಂಕ್ ಗ್ರಾಹಕರ ಖಾತೆಗೆ ವಂಚಕರು ಖಾತೆ ಹಾಕುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಹೀಗಾಗಿ ಬ್ಯಾಂಕ್ ಗ್ರಾಹಕರೂ ಸೇರಿದಂತೆ ಸಾರ್ವಜನಿಕರು ತಮಗೆ ಬರುವ ಇಂತಹ ಇ-ಮೇಲ್ ಗಳ ಮೇಲೆ ಯಾವುದೇ ಕಾರಣಕ್ಕೂ ಕ್ಲಿಕ್ ಮಾಡಬಾರದು. ಒಂದೊಮ್ಮೆ ಅಪ್ಪಿತಪ್ಪಿ ಕ್ಲಿಕ್ ಮಾಡಿದರೆ ವೈಯಕ್ತಿಕ ಮಾಹಿತಿ ಜೊತೆಗೆ ಹಣವನ್ನೂ ಕಳೆದುಕೊಳ್ಳುವುದು ನಿಶ್ಚಿತ.

— State Bank of India (@TheOfficialSBI) June 21, 2020

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...