alex Certify ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಕೆಲಸ ಕಳೆದುಕೊಂಡು ಸಂಕಷ್ಟದಲ್ಲಿರುವವರಿಗೆ ಸಂಭ್ರಮದ ಸುದ್ದಿ ಇಲ್ಲಿದೆ. ಅನೇಕ ಕಂಪನಿಗಳು ಉದ್ಯೋಗಿಗಳನ್ನು ಕಿತ್ತು ಹಾಕುತ್ತಿವೆ. ಇದೇ ಸಂದರ್ಭದಲ್ಲಿ ಅಮೆಜಾನ್ ಬರೋಬ್ಬರಿ 50 ಸಾವಿರ ಕೆಲಸಗಾರರು ಬೇಕೆಂದು ಹೇಳಿದೆ.

ಲಾಕ್ಡೌನ್ ಸಂಕಷ್ಟದಲ್ಲಿರುವ ಅನೇಕ ಕಂಪನಿಗಳು ಕೆಲಸಗಾರರ ಸಂಖ್ಯೆಯನ್ನು ಕಡಿತ ಮಾಡುತ್ತಿವೆ. ಭಾರತದ ಅತಿ ದೊಡ್ಡ ಅಂತರ್ಜಾಲ ಆಧಾರಿತ ಮಾರಾಟ ಸಂಸ್ಥೆಗಳಲ್ಲಿ ಒಂದಾದ ಅಮೆಜಾನ್ ವಿವಿಧ ಹಂತದಲ್ಲಿ 50,000 ಉದ್ಯೋಗಿಗಳು ಬೇಕಾಗಿದ್ದಾರೆ ಎಂದು ಪ್ರಕಟಿಸಿದೆ.

ದೇಶದಲ್ಲಿ ಮನೆಗಳಿಗೆ ವಸ್ತುಗಳನ್ನು ತಲುಪಿಸಲು ವಿವಿಧ ಹಂತದ ಉದ್ಯೋಗಿಗಳು ಬೇಕಾಗಿದ್ದಾರೆ. ಮನೆಗೆ ವಸ್ತುಗಳನ್ನು ತಲುಪಿಸುವವರು, ಕಚೇರಿ ಕೆಲಸಗಾರರು, ಅರೆಕಾಲಿಕ ಕೆಲಸಗಾರರು ಬೇಕಾಗಿದ್ದಾರೆ ಎಂದು ಹೇಳಲಾಗಿದೆ.

ಪ್ರಸ್ತುತ ಸಂದರ್ಭದಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಜನ ಸಾಮಾಜಿಕ ಅಂತರ ಪಾಲಿಸುತ್ತಾರೆ. ಇದಕ್ಕೆ ಪೂರಕವಾಗಿ ಕೆಲಸ ಮಾಡಲು ಉದ್ಯೋಗಿಗಳು ಬೇಕಾಗಿದ್ದಾರೆ ಎಂದು ಅಮೆಜಾನ್ ತಿಳಿಸಿದೆ. ಅನೇಕ ಕಂಪನಿಗಳು ಉದ್ಯೋಗಿಗಳನ್ನು ಮನೆಗೆ ಕಳುಹಿಸುತ್ತಿರುವ ಸಂದರ್ಭದಲ್ಲಿ ಅಮೆಜಾನ್ 50,000 ಕೆಲಸಗಾರರು ಬೇಕಾಗಿದ್ದಾರೆ ಎಂದು ಹೇಳಿದೆ. ಈ ಮೂಲಕ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...