ಬೆಂಗಳೂರು: ರಾಜ್ಯದಲ್ಲಿ ಸ್ವಸಹಾಯ ಗುಂಪುಗಳು ತಯಾರಿಸುವ ಉತ್ಪನ್ನಗಳ ಮಾರಾಟಕ್ಕೆ ಅಮೆಜಾನ್ ವೇದಿಕೆ ಒದಗಿಸಲಿದೆ.
ಅಮೆಜಾನ್ ಕಂಪನಿ ಸಾರ್ವಜನಿಕ ಕಾರ್ಯನೀತಿ ವಿಭಾಗದ ಉಪಾಧ್ಯಕ್ಷ ಚೇತನ್ ಕೃಷ್ಣಸ್ವಾಮಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ಕುರಿತಂತೆ ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ 1.5 ಲಕ್ಷ ಸ್ವಸಹಾಯ ಗುಂಪುಗಳು ಇದ್ದು ನಾನಾ ಉತ್ಪನ್ನಗಳನ್ನು ತಯಾರಿಸುತ್ತಿವೆ. ಇವುಗಳಿಗೆ ಇ -ಕಾಮರ್ಸ್ ವೇದಿಕೆ ಒದಗಿಸಿ ಉತ್ಪನ್ನ ಮಾರಾಟಕ್ಕೆ ಅನುಕೂಲ ಮಾಡಿಕೊಡಬೇಕಿದೆ ಎಂದು ಡಿಸಿಎಂ ಹೇಳಿದ್ದಾರೆ. ಗ್ರಾಮೀಣ ಮತ್ತು ನಗರ ಪ್ರದೇಶದ ಸ್ವಸಹಾಯ ಗುಂಪುಗಳಿಗೆ ಅಮೆಜಾನ್ ಇ –ಮಾರುಕಟ್ಟೆ ಮೂಲಕ ವೇದಿಕೆ ಒದಗಿಸಲಾಗುವುದು ಎಂದು ಚೇತನ್ ಕೃಷ್ಣಸ್ವಾಮಿ ಭರವಸೆ ನೀಡಿದ್ದಾರೆ.