ಬೆಂಗಳೂರು: ಡಾ. ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ(ಲೀಡ್ಕರ್) ಗೆ ಇದೇ ಮೊದಲ ಬಾರಿಗೆ ರಾಯಭಾರಿಯನ್ನು ಆಯ್ಕೆ ಮಾಡಲಾಗಿದೆ.
ಖ್ಯಾತ ನಟ ಹಾಗೂ ನಿರ್ಮಾಪಕ ಡಾಲಿ ಧನಂಜಯ್ ಅವರನ್ನು ಲಿಡ್ಕರ್ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದ್ದು, ಶೀಘ್ರದಲ್ಲೇ ಅವರು ಸರ್ಕಾರದ ಜಾಹೀರಾತಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ನಟ ಧನಂಜಯ್ ಅವರು ಲಿಡ್ಕರ್ ರಾಯಭಾರಿಯಾಗಿರುವುದು ಸಂತಸದ ವಿಷಯವಾಗಿದೆ. ಎಲ್ಲಾ ವರ್ಗದ ಜನರನ್ನು ತಲುಪಿರುವ ಕಲಾವಿದ ಅವರಾಗಿದ್ದು, ಅವರನ್ನು ಆಯ್ಕೆ ಮಾಡಿದ್ದೇವೆ. ಸಚಿವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದು, ಶೀಘ್ರವೇ ಜಾಹೀರಾತಿನ ಚಿತ್ರೀಕರಣ ನಡೆಯಲಿದೆ ಎಂದು ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ಎಸ್. ವಸುಂಧರಾ ಹೇಳಿದ್ದಾರೆ.