ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೊಂದು ಹೀನಕೃತ್ಯ ನಡೆದಿರುವ ಘಟನೆ ವರದಿಯಾಗಿದ್ದು, ದುರುಳರು ವಸತಿ ಶಾಲೆಯ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ.
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳು ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಪ್ಯಾರಾ ನರ್ಸಿಂಗ್ ಕೋರ್ಸ್ ಹೆಸರಲ್ಲಿ ಅಮಲು ಬರೆಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಸತಿ ಶಾಲೆಯ ಡಿ ದರ್ಜೆ ನೌಕರ ಸುರೇಶ್, ಶುಶ್ರೂಷಕಿ ಚಂದನ ಹಾಗೂ ನರ್ಸ್ ಪ್ರಿಯಕರ ವಿನಯ್ ಎಂದು ಗುರುತಿಸಲಾಗಿದೆ. ಆರೋಪಿಗಳು ವಿದ್ಯಾರ್ಥಿನಿಯರಿಗೆ ಅಮಲು ಬರುವ ಔಷಧ ನೀಡಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎನ್ನಲಾಗಿದೆ.
ಸುರೇಶ್ ಎಂಬ ಆರೋಪಿ ಪ್ಯಾರಾ ಮೆಡಿಕಲ್ ಕೋರ್ಸ್ ಮಾಡಿದರೆ ಕೆಲಸ ಸಿಗುತ್ತೆ ಎಂದು ವಿದ್ಯಾರ್ಥಿನಿಯರನ್ನು ಪುಸಲಾಯಿಸಿ ಆರೋಗ್ಯ ಕೇಂದ್ರಕ್ಕೆ ಕಳುಹಿಸುತ್ತಿದ್ದನಂತೆ. ನಂತರ ಚಂದನಾ ಕಾಫಿ, ಟೀ ಯಲ್ಲಿ ಔಷಧ ಬೆರೆಸಿ ವಿದ್ಯಾರ್ಥಿನಿಯರಿಗೆ ನೀಡುತ್ತಿದ್ದಳು. ಬಳಿಕ ವಿನಯ್ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನು ಎಂದು ಹೇಳಲಾಗಿದೆ.
ಸಾಂದರ್ಭಿಕ ಚಿತ್ರ