ಬೆಂಗಳೂರು: ವರ್ತಕರು, ರೈತರ ಹಿತ ಕಾಮಾಡಲು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಲಾಗುವುದು. ಎಲ್ಲಿ ಬೇಕಾದರೂ ವ್ಯಾಪಾರಕ್ಕೆ ಬ್ರೇಕ್ ಹಾಕಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಟಿ.ಎ. ಶರವಣ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಮಾರುಕಟ್ಟೆ ಪ್ರಾಂಗಣ, ಖಾಸಗಿ ಪ್ರಾಂಗಣ, ರೈತ ಗ್ರಾಹಕ ಮಾರುಕಟ್ಟೆ ಪ್ರಾಂಗಣದಲ್ಲಿ ಅಧಿಸೂಚಿತ ಕೃಷಿ ಉತ್ಪನ್ನಗಳ ಸಗಟು ವ್ಯಾಪಾರ ವಹಿವಾಟನ್ನು ಕಡ್ಡಾಯವಾಗಿ ಮಾಡಬೇಕಿದೆ. ಬೇರೆ ಕಡೆ ಮಾರಾಟ, ಖರೀದಿ ಮಾಡದಂತೆ ಕಾಯ್ದೆಗೆ ತಿದ್ದುಪಡಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಲು ಅನುಮೋದನೆ ನೀಡಿದ್ದು, ಸದನದಲ್ಲಿ ಚರ್ಚಿಸಿ ಅನುಮೋದನೆ ಪಡೆದ ನಂತರ ಜಾರಿಗೆ ತರಲಾಗುವುದು. ಹಿಂದಿನ ಕಾಯ್ದೆಯಂತೆ ರೈತರು ಎಲ್ಲಿ ಯಾರಿಗೆ ಬೇಕಾದರೂ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಇತ್ತು. ಇದರಿಂದ ಬೇರೆಯವರಿಗೆ ಮಾರಾಟ ಮಾಡಿದ ಬಳಿಕ ರೈತರಿಗೆ ಹಣ ಸಿಗದೇ ಕಂಗಾಲಾಗಿದ್ದರು. ಹೀಗಾಗಿ ರೈತರು, ವರ್ತಕರಿಗೆ ಅನುಕೂಲವಾಗುವಂತೆ ಕಾಯ್ದೆಗೆ ತಿದ್ದಪಡಿ ಮಾಡಲಾಗುವುದು ಎಂದು ಹೇಳಿದ್ದಾರೆ.