ಬೆಂಗಳೂರು: ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ವಿಧಾನಪರಿಷತ್ತಿನಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಸದಸ್ಯ ಕೆ. ಹರೀಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆ ಹಿಂಪಡೆದುಕೊಂಡಿರಬಹುದು. ಆದರೆ, ರಾಜ್ಯದಲ್ಲಿ ಎಪಿಎಂಸಿ ಕಾಯ್ದೆ ಹಿಂಪಡೆಯುವ ತೀರ್ಮಾನ ಮಾಡಿಲ್ಲ ಎಂದು ಹೇಳಿದ್ದಾರೆ.
ರೈತರು ಬೆಳೆದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟಮಾಡಲು ಅನುಕೂಲವಾಗುವಂತೆ ಕಾಯ್ದೆ ತರಲಾಗಿದೆ. ರೈತರ ಬೆಳೆಗೆ ಒಳ್ಳೆಯ ದರ ಸಿಗುತ್ತಿದೆ. ಹಿಂದೆ ರೈತರು ಎಪಿಎಂಸಿ ಹೊರಗೆ ಮಾರಾಟ ಮಾಡಿದರೆ ದಂಡ ಕೊಡಬೇಕಿತ್ತು. ಇದನ್ನು ತಪ್ಪಿಸಿ ಅವರು ಎಲ್ಲಿ ಬೇಕಾದರೂ ಉತ್ಪನ್ನ ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ಎಪಿಎಂಸಿಗಳು ನಷ್ಟದಲ್ಲಿಲ್ಲ. ನಷ್ಟಕ್ಕೆ ಒಳಗಾದಲ್ಲಿ ಸರ್ಕಾರದಿಂದ ಸೌಲಭ್ಯ ನೀಡಲಾಗುವುದು ಎಂದು ಹೇಳಿದ್ದಾರೆ.