ಬೆಂಗಳೂರು: ರೈತರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಎಪಿಎಂಸಿ ಕಾಯ್ದೆಗೆ ರಾಜ್ಯಪಾಲರ ಅಂಗೀಕಾರ ದೊರೆತಿದೆ.
ವಿಧಾನಮಂಡಲದ ಉಭಯ ಸದನಗಳಲ್ಲಿ ಅನುಮೋದನೆ ಪಡೆಯಲಾಗಿದ್ದ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕ 2020ಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಅಂಕಿತ ಹಾಕಿದ್ದಾರೆ.
ಇದರೊಂದಿಗೆ ವಿರೋಧದ ನಡುವೆಯೂ ರಾಜ್ಯದಲ್ಲಿ ಎಪಿಎಂಸಿ ತಿದ್ದುಪಡಿ ವಿಧೇಯಕ ಜಾರಿಗೆ ಬಂದಂತಾಗಿದೆ. ಕೇಂದ್ರ ಸರ್ಕಾರದ ಕಾಯ್ದೆಗೆ ಅನುಗುಣವಾಗಿ ರಾಜ್ಯದ ರೈತರು ಎಪಿಎಂಸಿಯಲ್ಲಿ ಅಥವಾ ಎಪಿಎಂಸಿಯಿಂದ ಹೊರಗೆ ಎಲ್ಲಿ ಬೇಕಾದರೂ ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬಹುದಾಗಿದೆ. ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರ ಹೋರಾಟ ಮುಂದುವರಿದಿದೆ.