ನವದೆಹಲಿ: ಯಾವುದೇ ಕಾರಣಕ್ಕೂ ಕೃಷಿ ತಿದ್ದುಪಡಿ ಕಾಯ್ದೆಯನ್ನು ಹಿಂದೆ ಪಡೆಯುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ತಿದ್ದುಪಡಿ ಕಾಯ್ದೆ ಕುರಿತಂತೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಾಗಿದೆ. ಯಾವ ಕಾರಣಕ್ಕೂ ಕೃಷಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವುದಿಲ್ಲ ಎಂದು ತಿಳಿಸಿದ್ದಾರೆ.
ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಧರಣಿ ನಡೆಸುತ್ತಿದ್ದಾರೆ. ಹೀಗೆ ಧರಣಿ ನಡೆಸುತ್ತಿರುವ ರೈತರು ಕೇಂದ್ರದ ಯೋಜನೆಯ ಬಗ್ಗೆ ತಿಳಿದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಎಪಿಎಂಸಿಗಳನ್ನು ಮುಚ್ಚುವುದಿಲ್ಲ ಎಂದು ತಿಳಿಸಿದ್ದಾರೆ.
ಕೃಷಿ ಕಾನೂನುಗಳ ಅನುಷ್ಠಾನದ ನಂತರ ಕೇಂದ್ರದ ಮೂಲಸೌಕರ್ಯ ನಿಧಿಯಿಂದ ಎಪಿಎಂಸಿಗಳನ್ನು ಬಲಪಡಿಸಲಾಗುವುದು. ಹೊಸ(ಕೃಷಿ) ಕಾನೂನುಗಳನ್ನು ಪರಿಚಯಿಸಿದ ನಂತರವೂ 1 ಲಕ್ಷ ಕೋಟಿ ರೂ. ಎಪಿಎಂಸಿಗಳಿಗೆ ಮೂಲಸೌಕರ್ಯ ನಿಧಿಯ ಭಾಗವಾಗಲಿದೆ ಎಂದು ಕೇಂದ್ರವು ಬಜೆಟ್ ನಲ್ಲಿ ಘೋಷಿಸಿತ್ತು. ಎಪಿಎಂಸಿ ನಿಧಿಯಿಂದ ಸಾಲಗಳು, ಬಡ್ಡಿ ಮನ್ನಾ ಲಾಭ ಪಡೆಯಬಹುದು ಎಂದು ಸಚಿವರು ಹೇಳಿದ್ದಾರೆ.