alex Certify ಹೊಸ ಮೊಬೈಲ್ ಖರೀದಿಸುವವರಿಗೆ ಇಲ್ಲಿದೆ ‘ಮುಖ್ಯ ಮಾಹಿತಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ಮೊಬೈಲ್ ಖರೀದಿಸುವವರಿಗೆ ಇಲ್ಲಿದೆ ‘ಮುಖ್ಯ ಮಾಹಿತಿ’

 ನವದೆಹಲಿ: ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ಅವುಗಳಲ್ಲಿ ಆರೋಗ್ಯ ಸೇತು ಆಪ್ ಬಳಕೆ ಕೂಡ ಒಂದಾಗಿದೆ.

ಆರೋಗ್ಯ ಸೇತು ಆಪ್ ಅನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಈಗಾಗಲೇ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹೊಸ ಮೊಬೈಲ್ ಗಳಲ್ಲಿ ಆರೋಗ್ಯ ಸೇತು ಆಪ್ ಕಡ್ಡಾಯವಾಗಿ ಅಳವಡಿಸುವಂತೆ ನಿಯಮ ರೂಪಿಸಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಹೇಳಲಾಗಿದೆ.

ಲಾಕ್ಡೌನ್ ಜಾರಿಯಾದ ನಂತರ ದೇಶದಲ್ಲಿ ಮಾರಾಟವಾಗುವ ಮೊಬೈಲ್ ಗಳಲ್ಲಿ ಮೊಬೈಲ್ ತಯಾರಕರು ಆರೋಗ್ಯ ಸೇತು ಆಪ್ ಅಳವಡಿಸಬೇಕು ಈ ಆಪ್ ಅನ್ನು ನೋಂದಣಿ ಮಾಡಿದ ನಂತರವೇ ಮೊಬೈಲ್ ಬಳಕೆ ಮಾಡುವ ರೀತಿ ಸಂಯೋಜನೆಗೊಳಿಸಬೇಕು. ನೋಂದಣಿ ವೇಳೆಯಲ್ಲಿ ಸ್ಕಿಪ್ ಆಯ್ಕೆ ನೀಡಬಾರದು ಎಂದು ನಿಯಮ ರೂಪಿಸಲಾಗುತ್ತಿದೆ. ಈಗಾಗಲೇ ಸುಮಾರು 5 ಕೋಟಿಗೂ ಹೆಚ್ಚು ಮಂದಿ ಆರೋಗ್ಯ ಸೇತು ಆಪ್ ಡೌನ್ಲೋಡ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...