alex Certify BIG NEWS: ಪೆಟ್ರೋಲ್ 100 ರೂ.ಗೆ ಏರಿಕೆಯಾದ ರಹಸ್ಯ ಬಿಚ್ಚಿಟ್ಟ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೆಟ್ರೋಲ್ 100 ರೂ.ಗೆ ಏರಿಕೆಯಾದ ರಹಸ್ಯ ಬಿಚ್ಚಿಟ್ಟ ಮೋದಿ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರತೊಡಗಿದೆ. ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ದರ 100 ರೂಪಾಯಿ ತಲುಪಿದೆ. ಭಾರಿ ಏರಿಕೆಯಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿಯಂತ್ರಿಸಬೇಕೆಂದು ಒತ್ತಾಯ ಕೇಳಿಬಂದಿದ್ದು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗತೊಡಗಿದೆ.

ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಪೆಟ್ರೋಲ್ ಬೆಲೆ ಏರಿಕೆ ವಿಚಾರವಾಗಿ ಮಾತನಾಡಿದ್ದಾರೆ. ಪೆಟ್ರೋಲ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರಗಳೇ ಕಾರಣ. ಹಿಂದಿನ ಸರ್ಕಾರಗಳು ತೈಲ ಆಮದು ಅವಲಂಬನೆಯನ್ನು ಕಡಿಮೆ ಮಾಡದ ಕಾರಣ ಪೆಟ್ರೋಲ್ ಬೆಲೆ ಏರಿಕೆಯಾಗಿದೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ಮಧ್ಯಮವರ್ಗದವರ ಬಗ್ಗೆ ಕಾಳಜಿ ಹೊಂದಿದೆ. ಪೆಟ್ರೋಲ್ ನಲ್ಲಿ ಎಥೆನಾಲ್ ಮಿಶ್ರಣದ ಪಾಲನ್ನು ಹೆಚ್ಚಿಸುವತ್ತ ಗಮನಹರಿಸಿದೆ ಎಂದು ತಿಳಿಸಿದ್ದಾರೆ. ತಮಿಳುನಾಡಿನಲ್ಲಿ ತೈಲ ಮತ್ತು ಅನಿಲ ಯೋಜನೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ನಾವು ತೈಲ ಆಮದು ಮೇಲೆ ಹೆಚ್ಚು ಅವಲಂಬಿತರಾಗಿದ್ದೇವೆ. ನಾನು ಯಾರನ್ನು ಟೀಕಿಸಲು ಬಯಸುವುದಿಲ್ಲ. ಆದರೆ, ಒಂದು ಮಾತನ್ನು ಹೇಳಬಯಸುತ್ತೇನೆ. ಇದರ ಬಗ್ಗೆ ಮೊದಲೇ ಗಮನಹರಿಸಿದ್ದರೆ ನಮ್ಮ ಮಧ್ಯಮವರ್ಗದವರಿಗೆ ಹೊರೆ ಆಗುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತ ಶೇಕಡ 85 ರಷ್ಟು ತೈಲ ಅಗತ್ಯತೆಗಳನ್ನು ಆಮದು ಮಾಡಿಕೊಳ್ಳುತ್ತಿದೆ. ಇದರಲ್ಲಿ ಅನಿಲದ ಅಗತ್ಯತೆ ಶೇಕಡ 53 ರಷ್ಟು ಇದೆ. ಹಿಂದಿನ ಸರ್ಕಾರಗಳು ತೈಲದ ಆಮದು ಅವಲಂಬನೆ ಕಡಿಮೆ ಮಾಡಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ನಮ್ಮ ಸರ್ಕಾರ ಕಬ್ಬಿನಿಂದ ಹೊರತೆಗೆಯಲಾದ ಎಥೆನಾಲ್ ಇಂಧನ ಬಳಕೆಗೆ ಒತ್ತು ನೀಡಿದೆ. ರೈತರಿಗೆ ಪರ್ಯಾಯ ಆದಾಯದ ಮೂಲವನ್ನು ನೀಡುತ್ತಿದೆ. ಮುಂದಿನ ದಿನಗಳಲ್ಲಿ ಇಂಧನ ಆಮದು ಅವಲಂಬನೆಯನ್ನು ಕಡಿಮೆ ಮಾಡಿ ನವೀಕರಿಸಬಹುದಾದ ಇಂಧನ ಮೂಲಗಳ ಬಳಕೆಗೆ ಸರ್ಕಾರ ಒತ್ತು ನೀಡಿದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...