ತೈಲ ಬೆಲೆ ಏರಿಕೆಯಿಂದ ತತ್ತರಿಸಿರುವ ಅಸ್ಸಾಂ ಜನತೆಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅಸ್ಸಾಂ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೆಚ್ಚುವರಿ ಸೆಸ್ ಹಿಂಪಡೆದಿದ್ದು, ಪ್ರತಿ ಲೀಟರ್ ತೈಲ ದರ 5 ರೂ. ಇಳಿಕೆಯಾಗಲಿದೆ.
ಹಣಕಾಸು ಸಚಿವ ಹಿಮಂತ್ ಬಿಸ್ವಾ ಶರ್ಮಾ ವಿಧಾನಸಭೆಯಲ್ಲಿ ಲೇಖಾನುದಾನ ಮಂಡಿಸಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೆಚ್ಚುವರಿ ಸೆಸ್ ಹಿಂಪಡೆದಿದ್ದಾರೆ. ಇದರಿಂದಾಗಿ ಪ್ರತಿ ಲೀಟರ್ ಇಂಧನ ದರ 5 ರೂಪಾಯಿ ಕಡಿಮೆಯಾಗಲಿದೆ. ಮದ್ಯದ ಮೇಲಿನ ಶೇಕಡ 25 ರಷ್ಟು ಹೆಚ್ಚುವರಿ ತೆರಿಗೆಯನ್ನು ಕೈಬಿಡುವುದಾಗಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ಕೋವಿಡ್ ಪ್ರಕರಣ ಹೆಚ್ಚಾಗಿದ್ದ ಸಂದರ್ಭದಲ್ಲಿ ಮದ್ಯ, ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಲಾಗಿದ್ದು, ಈಗ ಕೋವಿಡ್ ಕಡಿಮೆಯಾದ ಹಿನ್ನಲೆಯಲ್ಲಿ ಹೆಚ್ಚುವರಿ ಸೆಸ್ ಕೈಬಿಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.