alex Certify ATM ಬಳಕೆದಾರರಿಗೆ ಸಿಹಿ ಸುದ್ದಿ, ಎಂಎಸ್ಎಂಇಗಳಿಗೆ ಬಂಪರ್ ಗಿಫ್ಟ್ – ಅಡಮಾನವಿಲ್ಲದೆ ಸಾಲ, 1 ವರ್ಷದ ಬಳಿಕ ಮರುಪಾವತಿಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ATM ಬಳಕೆದಾರರಿಗೆ ಸಿಹಿ ಸುದ್ದಿ, ಎಂಎಸ್ಎಂಇಗಳಿಗೆ ಬಂಪರ್ ಗಿಫ್ಟ್ – ಅಡಮಾನವಿಲ್ಲದೆ ಸಾಲ, 1 ವರ್ಷದ ಬಳಿಕ ಮರುಪಾವತಿಗೆ ಅವಕಾಶ

ನವದೆಹಲಿ: ಸಣ್ಣ, ಅತಿಸಣ್ಣ, ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಸಾಲ ಸೌಲಭ್ಯ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

ವಿಶೇಷ ಪ್ಯಾಕೇಜ್ ಕುರಿತಾಗಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಣ್ಣ, ಅತಿ ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಜಾಮೀನು ರಹಿತ ಸಾಲ ನೀಡಲಾಗುವುದು. ಯಾವುದೇ ಅಡಮಾನವಿಲ್ಲದೆ ಸಣ್ಣ ಕೈಗಾರಿಕೆಗಳಿಗೆ ಸಾಲಸೌಲಭ್ಯ ಕಲ್ಪಿಸಲಾಗುವುದು. ಅದೇ ರೀತಿ ಸಾಲ ಮರುಪಾವತಿಗೆ ನಾಲ್ಕು ವರ್ಷ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದರಿಂದಾಗಿ ಸುಮಾರು 45 ಲಕ್ಷ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಅನುಕೂಲವಾಗುತ್ತದೆ. ಸಣ್ಣ ಕೈಗಾರಿಕೆಗಳಿಗೆ ಉದ್ಯೋಗಿಗಳಿಗೆ ವೇತನ ನೀಡಲು ಹಣ ಇಲ್ಲದಿದ್ದರೆ ಕೇಂದ್ರ ಸರ್ಕಾರದ ನೆರವು ನೀಡಲಾಗುವುದು. ಸಣ್ಣ ಕೈಗಾರಿಕೆಗಳಿಗೆ ಸಹಾಯಕ ಸಾಲವಾಗಿ 20,000 ಕೋಟಿ ರೂಪಾಯಿ ಕಾಯ್ದಿರಿಸಲಾಗಿದೆ. ಸಾಲ ನೀಡಿದ ಮೊದಲ 12 ತಿಂಗಳವರೆಗೆ ಸಾಲ ಮರುಪಾವತಿಸುವ ಅವಶ್ಯಕತೆ ಇಲ್ಲ. ಬ್ಯಾಂಕುಗಳು ನೀಡುವ ಸಾಲಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ ನೀಡುತ್ತದೆ. ಅದೇ ರೀತಿ ಮೂರು ತಿಂಗಳು ಎಟಿಎಂಗಳಲ್ಲಿ ಹಣ ಪಡೆಯಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...