alex Certify JOB FAIR : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB FAIR : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಶಿವಮೊಗ್ಗ : ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ನ.08 ರಂದು ಶಿವಮೊಗ್ಗದ ಬಿ.ಹೆಚ್.ರಸ್ತೆ, ಸರ್ಕಾರಿ ಪದವಿ ಪೂರ್ವ ಸೈನ್ಸ್ ಫೀಲ್ಡ್ನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್ಎಸ್ಎಲ್ಸಿ/ಪಿಯುಸಿ/ ಐಟಿಐ/ಡಿಪ್ಲೊಮಾ/ಬಿಇ ಮತ್ತು ಪದವಿ/ಸ್ನಾತಕೋತ್ತರ ಪದವಿ ಉತ್ತೀರ್ಣ/ಅನುತ್ತೀರ್ಣ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವುದು.

ಆಸಕ್ತ ಅಭ್ಯರ್ಥಿಗಳು ಆನ್ಲೈನ್ http://skillconnect.kaushalkar.com/candidatereg ರಲ್ಲಿ ಅಥವಾ ಸ್ಥಳದಲ್ಲೆ ನೇರವಾಗಿ ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸುರೇರ್ಶ ಹೆಚ್.ಎಂ. ದೂ.ಸಂ.: 08182-255294/ 9019485688/9880005425 ಇವರನ್ನು ಖುದ್ದಾಗಿ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...