alex Certify ವಿದ್ಯಾರ್ಥಿಗಳ ಗಮನಕ್ಕೆ : ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ನ.30 ಕೊನೆಯ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳ ಗಮನಕ್ಕೆ : ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ನ.30 ಕೊನೆಯ ದಿನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2023-24ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯ ಸಾಲ ಸೌಲಭ್ಯವನ್ನು ಪಡೆಯಲು ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಂದ ಆನ್ ಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಲ್ಲಿ ಸಿ.ಇ.ಟಿ/ ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ ನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಸೌಲಭ್ಯ ಪಡೆಯಬಹುದು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು.

ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಹಾಗೂ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ವೈಬ್ ಸೈಟ್ www.kacdc.karnataka.gov.in ನಲ್ಲಿ ನವೆಂಬರ್ 30ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಉತ್ತರ ಜಿಲ್ಲೆ, ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್, ಗಂಗಾನಗರ, ಬೆಂಗಳೂರು-560 032 ಅಥವಾ ನಿಗಮದ ಜಿಲ್ಲಾ ಕಛೇರಿಯ ಸಹಾಯವಾಣಿ ಸಂಖ್ಯೆ :080-23539600/ 080-23539601 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ಜಿಲ್ಲೆ, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...