ಬೆಂಗಳೂರು: ರೈತರಿಗೆ ಬೆಳೆ ವಿಮೆ ಪಾವತಿಯಲ್ಲಿ ಲೋಪ ಉಂಟಾಗಿದೆ. ರಾಜ್ಯದ ರೈತರಿಗೆ ಬೆಳೆ ವಿಮೆ ಹಣವನ್ನು ಸರಿಯಾಗಿ ಪಾವತಿಸದ ಕಾರಣ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿಗೆ ನೋಟಿಸ್ ನೀಡಲು ಕೃಷಿ ಸಚಿವ ಬಿ.ಸಿ. ಪಾಟೀಲ್ ಸೂಚಿಸಿದ್ದಾರೆ.
ಬೆಳೆ ವಿಮೆ ಹಣ ಸರಿಯಾಗಿ ಪಾವತಿಸದ ಮತ್ತು ಕೃಷಿ ಇಲಾಖೆಯ ಸಭೆಗಳಿಗೆ ಹಾಜರಾಗದ ಹಿನ್ನೆಲೆಯಲ್ಲಿ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿಗೆ ನೋಟಿಸ್ ನೀಡುವಂತೆ ಸಚಿವರು ಸೂಚಿಸಿದ್ದಾರೆ.
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಸಂಬಂಧಿಸಿದಂತೆ ಕೃಷಿ ಇಲಾಖೆಯ ಅಧಿಕಾರಿಗಳು, ವಿಮೆ ಕಂಪನಿಗಳ ಮುಖ್ಯಸ್ಥರೊಂದಿಗೆ ಸಚಿವರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಬಜಾಜ್ ಅಲಯನ್ಸ್ ಸೇರಿದಂತೆ ಹಲವು ವಿಮೆ ಕಂಪನಿಗಳ ಪ್ರಮುಖರು ಭಾಗವಹಿಸಿ ಸಮಸ್ಯೆಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದ್ದಾರೆ. ಆದರೆ, ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ವತಿಯಿಂದ ಯಾವ ಪ್ರತಿನಿಧಿ ಭಾಗವಹಿಸದ ಹಿನ್ನೆಲೆಯಲ್ಲಿ ನೋಟಿಸ್ ನೀಡುವಂತೆ ಸಚಿವರು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.