ಬೆಳಗಾವಿ: ಹಾಲಿನ ದರ ಹೆಚ್ಚಳ ಮಾಡುವಂತೆ 14 ಹಾಲು ಒಕ್ಕೂಟಗಳು ಒತ್ತಡ ಹಾಕುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಾಲಿನ ದರ ಹೆಚ್ಚಳದ ಬಗ್ಗೆ ಸಿಎಂ ಕೈಗೊಳ್ಳುವ ನಿರ್ಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಹಾಲಿನ ದರ ಪರಿಷ್ಕರಣೆ ಮಾಡುವುದರಿಂದ ಉಂಟಾಗುವ ಸಾಧಕ-ಬಾಧಕಗಳ ಬಗ್ಗೆ ಪರಿಶೀಲನೆ ನಡೆಸಿ ಸಿಎಂ ನಿರ್ಧಾರ ಕೈಗೊಳ್ಳಲಿದ್ದಾರೆ. ದೇಶದಲ್ಲಿಯೇ ಅತ್ಯಂತ ಕಡಿಮೆ ದರದಲ್ಲಿ ಕೆಎಂಎಫ್ ಹಾಲು ಪೂರೈಕೆ ಮಾಡುತ್ತಿದೆ. ರೈತರಿಗೆ ಅನುಕೂಲ ಕಲ್ಪಿಸಲು ದರ ಹೆಚ್ಚಳ ಅನಿವಾರ್ಯವಾಗಿದೆ ಎಂದು ಅವರು ಹೇಳಿದ್ದಾರೆ.