ಬೆಂಗಳೂರು: ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಲು ಎಲ್ಲ ಹಾಲು ಒಕ್ಕೂಟಗಳ ಅಧ್ಯಕ್ಷರು ಕೋರಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಕೆಎಂಎಫ್ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ನಂದಿನಿ ಹಾಲಿನ ದರ ಹೆಚ್ಚಳದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಪ್ರಸ್ತುತ ನಂದಿನಿ ಹಾಲಿನ ದರ ಲೀಟರ್ ಗೆ 37 ರೂ. ಇದ್ದು, ಅದನ್ನು 40 ರೂ.ಗೆ ಹೆಚ್ಚಳಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ದರ ಏರಿಕೆಯಾದ 3 ರೂಪಾಯಿ ರೈತರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.