ಬೆಂಗಳೂರು: ರೈತರಿಗೆ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಬೆಂಗಳೂರಿನ ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಸಭೆ ನಡೆಸಿದ್ದಾರೆ.
ಫೆಬ್ರವರಿಯಿಂದ ಜುಲೈ 4ರ ವರೆಗೆ ಹಾಲು ಉತ್ಪಾದಕರಿಗೆ ನೀಡಬೇಕಾಗಿದ್ದ 530 ಕೋಟಿ ರೂಪಾಯಿ ಪ್ರೋತ್ಸಾಹ ಧನ ಬಿಡುಗಡೆಯಾಗಿದ್ದು ಶೀಘ್ರವೇ ರೈತರ ಖಾತೆಗಳಿಗೆ ಪಾವತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕೆಎಂಎಫ್ ನಲ್ಲಿ ಪ್ರತಿದಿನ 88 ಲಕ್ಷ ಲೀಟರ್ ಹಾಲು ಶೇಖರಣೆಯಾಗುತ್ತಿದೆ. ಕಳೆದ ವರ್ಷಕ್ಕಿಂತ 6 ಲಕ್ಷ ಲೀಟರ್ ಹೆಚ್ಚುವರಿ ಹಾಲು ಬಂದಿದೆ ಎಂದು ಹೇಳಿದ್ದಾರೆ.