ನವದೆಹಲಿ: ಸೇವಾ ನಿಯಮಗಳ ಸುಧಾರಣೆ, ನೇಮಕಾತಿ, ವಜಾ ನೀತಿ ಮೊದಲಾದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘದ ಸದಸ್ಯರು ನ. 19 ರಂದು ಬ್ಯಾಂಕ್ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.
ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿರುವುದರಿಂದ ಮುಂದಿನ ವಾರ ದೇಶಾದ್ಯಂತ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಷೇರು ಮಾರುಕಟ್ಟೆಗೆ ದಾಖಲೆ ಸಲ್ಲಿಸಿದ್ದಾರೆ. ಭಾರತೀಯ ಬ್ಯಾಂಕುಗಳ ಸಂಘಕ್ಕೆ ಮುಷ್ಕರದ ನೋಟಿಸ್ ನೀಡಲಾಗಿದೆ.
ಬ್ಯಾಂಕಿನ ಶಾಖೆಗಳು ಮತ್ತು ಕಚೇರಿಗಳ ಕಾರ್ಯನಿರ್ವಹಣೆ ಮೇಲೆ ಮುಷ್ಕರದಿಂದ ಪರಿಣಾಮ ಉಂಟಾಗಲಿದೆ. ನ. 19 ರಂದು ಮೂರನೇ ಶನಿವಾರವಾಗಿದ್ದು ಅಂದು ಬ್ಯಾಂಕುಗಳಿಗೆ ರಜೆ ಇರುವುದಿಲ್ಲ. ವಾರಾಂತ್ಯದಲ್ಲಿ ಮುಷ್ಕರ ನಡೆಯಲಿದೆ, ಮರುದಿನ ಭಾನುವಾರ ರಜೆ ಇರುವುದರಿಂದ ಬ್ಯಾಂಕಿಂಗ್ ವ್ಯವಹಾರಗಳಿದ್ದಲ್ಲಿ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು ಎಂದು ಹೇಳಲಾಗಿದೆ.