ನವದೆಹಲಿ: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಬ್ಯಾಂಕ್ ಉದ್ಯೋಗಿಗಳ ಸಂಘಟನೆ ನಾಳೆ ದೇಶಾದ್ಯಂತ ಸಾರ್ವಜನಿಕ ಬ್ಯಾಂಕುಗಳ ಮುಷ್ಕರಕ್ಕೆ ಕರೆ ನೀಡಿದೆ.
ನೌಕರಿ ಕಡಿತ, ಪದಾಧಿಕಾರಿಗಳ ವಿರುದ್ಧ ಉದ್ದೇಶಪೂರ್ವಕ ಕ್ರಮ ವಿರೋಧಿಸಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಶನಿವಾರ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಗ್ರಾಹಕರು ತಮ್ಮ ಯಾವುದೇ ಬ್ಯಾಂಕಿಂಗ್ ವ್ಯವಹಾರಗಳಿದ್ದಲ್ಲಿ ಇಂದೇ ಮುಗಿಸಿಕೊಳ್ಳುವುದು ಒಳ್ಳೆಯದು.
ಗ್ರಾಹಕರ ಖಾಸಗಿತನ ಪಣಕ್ಕಿಟ್ಟು ಸಾವಿರಾರು ಉದ್ಯೋಗಗಳನ್ನು ಬ್ಯಾಂಕುಗಳು ಹೊರಗುತ್ತಿಗೆ ನೀಡುತ್ತಿವೆ. ಸರ್ಕಾರಿ ನೇಮಕಾತಿ ಕಡಿಮೆ ಮಾಡಿವೆ. ಪದಾಧಿಕಾರಿಗಳ ವಿರುದ್ಧ ಉದ್ದೇಶಪೂರ್ವಕವಾಗಿ ಕ್ರಮಕೈಗೊಳ್ಳುತ್ತಿವೆ. ಇದನ್ನು ವಿರೋಧಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಕಾರ್ಯದರ್ಶಿ ಸಿ.ಹೆಚ್. ವೆಂಕಟಾಚಲಂ ತಿಳಿಸಿದ್ದಾರೆ.